ಭಟ್ಕಳ: ಈ ಹಿಂದೆ ಮಾಂಸಾಹಾರ ಸೇವಿಸಿ
ಧರ್ಮಸ್ಥಳಕ್ಕೆ ತೆರಳಿದ್ದ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸ್ವತಃ ಇತ್ತೀಚೆಗೆ ಭಟ್ಕಳಕ್ಕೆ ಭೇಟಿ ನೀಡಿದ್ದ ವೇಳೆ ಭರ್ಜರಿ ಮೀನೂಟ ಸೇವಿಸಿ ದೇವಸ್ಥಾನಕ್ಕೆ ಭೇಟಿ ನೀಡಿರುವುದಾಗಿ ಫೋಟೋ ಟ್ರೋಲಾಗಿದ್ದು, ಛತ್ರಪತಿ ಶಿವಾಜಿ ಜಯಂತಿ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕಾರವಾರಕ್ಕೆ ಫೆ.19ರಂದು ಭೇಟಿ ನೀಡಿದ್ದ ಸಿ.ಟಿ.ರವಿ, ಮಧ್ಯಾಹ್ನ 2.30ಕ್ಕೆ ಕಾರ್ಯಕ್ರಮ ಮುಗಿಸಿ ಭಟ್ಕಳಕ್ಕೆ ತೆರಳಿದ್ದರು. ಈ ವೇಳೆ ಶಾಸಕ ಸುನಿಲ್ ನಾಯ್ಕ ಅವರ ಶಿರಾಲಿಯ ಮನೆಯಲ್ಲಿ ಬಿಜೆಪಿಯ ಸ್ಥಳೀಯ ಮುಖಂಡರ ಜೊತೆ ಸಿ.ಟಿ.ರವಿ ಮೀನೂಟ ಸೇವಿಸಿದ್ದಾರೆ ಎಂದು ಸುದ್ದಿ ಹಬ್ಬಿದ್ದು, ಫೋಟೋ ವೈರಲ್ ಆಗಿತ್ತು. ಇದೀಗ ಈ ಬಗ್ಗೆ. ಸಿ.ಟಿ ರವಿ ಅವರೇ ವಿವರಣೆ ನೀಡಿದ್ದಾರೆ.
ನಾನು ಮಾಂಸ ತಿಂದು ದೇವಾಲಯಕ್ಕೆ ಹೋಗಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸ್ಪಷ್ಟಪಡಿಸಿದ್ದಾರೆ. ಭಟ್ಕಳಕ್ಕೆ ಹೋದಾಗ ನಾಗಬನ ನೋಡಲು ಕರೆದಿದ್ದರು. ನನಗೆ ದೇವರ ಬಗ್ಗೆ ಶ್ರದ್ಧೆ ಇದೆ, ದೇವಾಲಯಕ್ಕೆ ನಾನ್ ವೆಜ್ ತಿಂದು ಹೋಗಿಲ್ಲ. ನಾನು ಹುಟ್ಟಿರೋದೆ ಮಾಂಸ ತಿನ್ನೋ ಜಾತಿಯಲ್ಲಿ. ಆದರೆ ಮಾಂಸ ತಿಂದು ದೇವಾಲಯಕ್ಕೆ ಹೋಗಿಲ್ಲ. ಸುಮ್ಮನೆ ವಿವಾದ ಹುಟ್ಟಹಾಕಲು ಕೆಲವರು ಹೀಗೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ವೃತವನ್ನು ಆಚರಿಸುವವನು ನಾನು, ನನಗೆ ದೇವರ ಬಗ್ಗೆ ಶ್ರದ್ಧೆ ಇದೆ. ಮಾಂಸ ತಿನ್ನುತ್ತೇನೆ ಹಾಗಂತ ತಿಂದು ದಾಸ್ಟ್ಯ ತೋರಿಸಲ್ಲ. ಮಾಂಸ ತಿಂದು ದೇವಾಲಯಕ್ಕೆ ಹೋಗ್ತೀನಿ ಏನಿವಾಗ, ಯಾರು ಏನ್ ಮಾಡ್ತಾರೆ ಅಂತ ಸಿದ್ದು ರೀತಿ ಹೇಳಲ್ಲ ಎಂದರು. ವೈರಲ್ ಆಗಿದ್ದ ಫೋಟೋ ಕುರಿತು ಮಂಡ್ಯದಲ್ಲಿ ಸ್ಪಷ್ಟನೆ ಅವರು ಸ್ಪಷ್ಟನೆ ನೀಡಿದರು.