ಕುಮಟಾ: ತಾಲೂಕಿನ ಹಿರೇಗುತ್ತಿಯ ರಾ.ಹೆ 66ರಲ್ಲಿ ಟ್ಯಾಂಕರ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷರು ಸೇರಿದಂತೆ ಮೂವರು ಗಂಭೀರ ಗಾಯಗೊಂಡಿದ್ದಾರೆ. ತಾಲೂಕಿನ ಹಿರೇಗುತ್ತಿಯ ರಾ.ಹೆ 66ರಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಗಣಪಯ್ಯ ಗೌಡರ ಕಾರು ಅಪಘಾತಕ್ಕೀಡಾಗಿದೆ. ಅಂಕೋಲಾದಿಂದ ಹೊನ್ನಾವರ ಕಡೆಗೆ ಪ್ರಯಾಣ ಬೆಳೆಸುತ್ತಿರುವಾಗ ಈ ಅಪಘಾತ ಸಂಭವಿಸಿದೆ. ಅತೀ ವೇಗವಾಗಿ ಬಂದ ಟ್ಯಾಂಕರ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಜೆಡಿಎಸ್ ಜಿಲ್ಲಾಧ್ಯಕ್ಷ ಗಣಪಯ್ಯ ಗೌಡ, ವಿ ಎಂ ಭಂಡಾರಿ, ಪರಮೇಶ್ವರ ನಾಯ್ಕ ಗಂಭೀರ ಗಾಯಗೊಂಡಿದ್ದಾರೆ.
ಈ ಬಗ್ಗೆ ಮಾಹಿತಿ ಪಡೆದ ಜೆಡಿಎಸ್ ಮುಖಂಡ ಸೂರಜ ನಾಯ್ಕ ಸೋನಿ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಕುಮಟಾ ತಾಲೂಕು ಆಸ್ಪತ್ರೆಗೆ ದೌಡಾಯಿಸಿ, ಅಗತ್ಯ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ. ಅಲ್ಲದೇ ಕೈಕಾಲು ಪ್ರಾಕ್ಟರ್ ಸೇರಿದಂತೆ ಶಿರ ಭಾಗಕ್ಕೂ ಗಂಭೀರ ಗಾಯವಾಗಿದೆ ಎನ್ನಲಾಗಿದೆ. ಸೂರಜ್ ಸೋನಿ ಅವರು ತಕ್ಷಣ ಗಾಯಾಳುಗಳನ್ನು ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲು ವ್ಯವಸ್ಥೆ ಮಾಡಿರುವುದಲ್ಲದೆ ಅವರ ಜೊತೆಗೆ ತೆರಳಿ, ಮಣಿಪಾಲ ಆಸ್ಪತ್ರೆಯಲ್ಲೂ ಹೆಚ್ಚಿನ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ.