ಕುಮಟಾ : ತಾಲೂಕಿನ ಹಂದಿಗೋಣದ ಮಹಾಗಣಪತಿ ಕ್ರೀಡಾ ಬಳಗದ ಆಶ್ರಯದಲ್ಲಿ ನಡೆದ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾವಳಿ ನಡೆಯಿತು. ಕುಮಟಾ ಹೊನ್ನಾವರ ವಿಧಾನ ಸಭಾ ಕ್ಷೆತ್ರದ ಜೆ ಡಿ ಎಸ್ ಅಭ್ಯರ್ಥಿ ಸೂರಜ್ ನಾಯ್ಕ ಸೋನಿ ಕಾರ್ಯಕ್ರಮ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು ಇಂತಹ ಕ್ರೀಡೆಗಳನ್ನು ಆಯೋಜಿಸುವುದರಿಂದ ಯುವ ಕ್ರೀಡಾ ಪಟುಗಳಲ್ಲಿ ದೈಹಿಕ ಹಾಗು ಮಾನಸಿಕ ಆರೋಗ್ಯ ಅತ್ಯಂತ ಉತ್ಕೃಷ್ಟವಾಗಿರುತ್ತದೆ . ಯಾರು ಉತ್ತಮ ದೈಹಿಕ ಮತ್ತು ಮಾನಸಿಕ ಆರೋಗ್ಯ ಹೊಂದಿರುತ್ತಾರೋ ತಮ್ಮ ಜೀವನದ ಎಲ್ಲಾ ಕಾರ್ಯಗಳಲ್ಲಿ ಅತ್ಯಂತ ಯಶಸ್ವಿಯಾಗಿ ಮುನ್ನಡೆಯುತ್ತಾರೆ . ಹಾಗೂ ಕ್ರೀಡೆಗಳಿಂದ ಪರಸ್ಪರ ಪ್ರೀತಿ ಪ್ರೇಮ ಹಾಗೂ ಸೌಹಾರ್ದತೆಯಿಂದ ಬಾಳಲು ಸಹಕಾರಿಯಾಗುತ್ತದೆ . ಅಲ್ಲದೇ ಕ್ರಿಕೆಟ್ ಅಂತರ್ ರಾಷ್ಟ್ರೀಯ ಆಟವಾಗಿರುವುದರಿಂದ ಉತ್ತಮ ಪ್ರತಿಭೆ ಪ್ರದರ್ಶಿಸಿದರೆ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಆಡುವ ಅವಕಾಶ ನಿಮ್ಮದಾಗಿರುತ್ತದೆ ಎಂದು ಹುರಿದುಂಬಿಸಿದರು.

RELATED ARTICLES  ಡಿ.22‌ ರಿಂದ‌ ಡಿ.24ರವರೆಗೆ ದತ್ತಿನಿಧಿ ಹಾಗೂ ಪ್ರತಿಭಾ ಪುರಸ್ಕಾರ, ಸಂಗೀತ ಸಿಂಚನ ಸಮಾರಂಭ

ಈ‌ ಸಂದರ್ಭದಲ್ಲಿ ಮಹಾಗಣಪತಿ ಕ್ರೀಡಾ ಬಳಗದ ಪದಾಧಿಕಾರಿಗಳು ಹಾಗೂ ಕ್ರೀಡಾಪಟುಗಳು ಇದ್ದರು.