ಸರ್ಕಾರಿ ನೌಕರರಿಗೆ ಪ್ರತಿಶತ 17ರಷ್ಟು ಹೆಚ್ಚಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ಹಣಕಾಸು ಇಲಾಖೆಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆ ಮುಕ್ತಾಯದ ನಂತರ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಸರ್ಕಾರಿ ನೌಕರರಿಗೆ ಪ್ರತಿಶತ 17ರಷ್ಟು ಹೆಚ್ಚಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಇದೀಗ ಆದೇಶ ಹೊರಡಿಸಿದೆ. ಏಪ್ರಿಲ್ 1 ರಿಂದ ಜಾರಿಯಾಗಲಿದೆ ಎಂದಿದ್ದಾರೆ. ಎನ್ ಪಿಎಸ್ ರದ್ದು ಬಗ್ಗೆ ಸಮಿತಿ ರಚನೆ ಬಳಿಕ ಸರ್ಕಾರದಿಂದ ಮಹತ್ವದ ನಿರ್ಣಯ ಕೈಗೊಳ್ಳಲಾಗುವುದು. ಹೊಸ ಪಿಂಚಣಿ ಯೋಜನೆ (NPS) ರದ್ದು ಮಾಡುವ ಬೇಡಿಕೆ ಪರಾಮರ್ಶೆ ಮಾಡ್ತೇವೆ. ಎಸಿಎಸ್ ನೇತೃತ್ವದಲ್ಲಿ ಸಮಿತಿ ರಚಿಸುತ್ತೇವೆ. ಬೇರೆ ರಾಜ್ಯಗಳಲ್ಲಿ ಯಾವ ರೀತಿ ಪರಿಸ್ಥಿತಿ ಇದೆ ಅಂತ ಅಧ್ಯಯನ ನಡೆಸಿ ವರದಿ ಕೊಡಲು ಸೂಚಿಸ್ತೇವೆ ಎಂದರು. ಒಟ್ಟಿನಲ್ಲಿ 7 ನೇ ವೇತನ ಆಯೋಗದಿಂದ ಸರ್ಕಾರ ಇನ್ನೂ ವರದಿ ಪಡೆದಿಲ್ಲ. ಆದರೆ ಸರ್ಕಾರಿ ನೌಕರರ ಒತ್ತಡ ತೀವ್ರವಾದ ಹಿನ್ನೆಲೆಯಲ್ಲಿ 17% ಮಧ್ಯಂತರ ಪರಿಹಾರಕ್ಕೆ ಭರವಸೆ ಕೊಟ್ಟಿದೆ.