ಕುಮಟಾ : ಕರ್ನಾಟಕ ರಾಜ್ಯ ವಾಣಿಜ್ಯ ಶಾಲೆಗಳ ಸಂಘದ ಆಶ್ರಯದಲ್ಲಿ ನಡೆದ 53ನೆಯ ಸರ್ವ ಸದಸ್ಯರ ಸಭೆಯಲ್ಲಿ ಪಟ್ಟಣದ ಕೆನರಾ ವಾಣಿಜ್ಯ ಮತ್ತು ಕಂಪ್ಯೂಟರ್ ವಿದ್ಯಾಸಂಸ್ಥೆಯ ಪ್ರಾಚಾರ್ಯ ಬಾಲಚಂದ್ರ ಹೆಬ್ಬಾರ್ ಇವರಿಗೆ ಗೌರವ ಫೆಲೋಶಿಪ್ ನೀಡಿ ಗೌರವಿಸಲಾಯಿತು. ಕಳೆದ 52 ವರ್ಷಗಳಿಂದ ಕುಮಟಾ ಮತ್ತು ಹೊನ್ನಾವರ ತಾಲೂಕಿನಲ್ಲಿ ವಾಣಿಜ್ಯ (ಬೆರಳಚ್ಚು ಮತ್ತು ಶೀಘ್ರ ಲಿಪಿ) ಶಿಕ್ಷಣಕ್ಕಾಗಿ ಸಲ್ಲಿಸಿದ ಸೇವೆಯನ್ನು ಗುರುತಿಸಿ, ಹುಬ್ಬಳ್ಳಿಯ ರಂಭಾಪುರಿ ಜಗದ್ಗುರು ವೀರ ಗಂಗಾಧರ ಕಲ್ಯಾಣ ಮಂಟಪದಲ್ಲಿ ನಡೆದ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.