ಯಲ್ಲಾಪುರ: ಹುಬ್ಬಳ್ಳಿಯಿಂದ ಗೋವಾ ಕಡೆಗೆ ಖಾಲಿ ಅಡುಗೆ ಸಿಲಿಂಡರ್ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ತಾಲೂಕಿನ ರಾಷ್ಟ್ರೀಯ ಹೆದ್ದಾರಿಯ ಆರತಿಬೈಲ್ ಹಳ್ಳದಲ್ಲಿ ಬಿದ್ದು ಸಂಪೂರ್ಣ ಜಖಂ ಆಗಿದೆ. ಚಾಲಕ ಮತ್ತು ಕ್ಲೀನರ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೋಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.