ಗೋಕರ್ಣ : ಇಲ್ಲಿನ ಓಂ ಕಡಲತೀರಕ್ಕೆ ಸಾಗುವ ಮಾರ್ಗದಲ್ಲಿ ಒಂದೇ ದಿನ ಎರಡು ಪ್ರತ್ಯೇಕ ಅಪಘಾತಗಳು ನಡೆದಿದೆ. ಮಧ್ಯಾಹ್ನ ಖಾಸಗಿ ರೆಸಾರ್ಟ್ ಬಳಿ ಎರಡು ಖಾಸಗಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಪ್ರಯಾಣಿಕರು ಗಾಯಗೊಂಡಿದ್ದಾರೆ. ಇನ್ನೂ ಇದೇ ರಸ್ತೆಯ ಅಶೋಕೆ ಕ್ರಾಸ್ ಬಳಿ ಕಾರು ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಹೊಂಡಕ್ಕೆ ಬಿದ್ದಿತ್ತು. ಇದರಲ್ಲಿದ್ದ ಆರು ಮಂದಿ ಪ್ರಯಾಣಿಕರಿಗೂ ಗಾಯಗೊಂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಇವರೆಲ್ಲರೂ ಪುಣೆಯವರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸ್ ತುರ್ತು ಸೇವಾ ವಾಹನ 112 ತೆರಳಿ, ಸಾರ್ವಜನಿಕರ ಸಹಾಯದಿಂದ ಮುಂದಿನ ಪ್ರಕ್ರಿಯೆ ಕೈಗೊಳ್ಳಲಾಗಿದೆ.