ಬೆಂಗಳೂರು : ರಾಜ್ಯದ 5 ಮತ್ತು 8 ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದ್ದು, ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದೆ.

ಈ ಸಂಬಂಧ ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ಸುತ್ತೋಲೆ ರದ್ದುಪಡಿಸಿದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿ ವಿಚಾರಣೆ ನಾಳೆಗೆ ಮುಂದೂಡಿದೆ.

ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ ನೀಡಿದ್ದು, ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಾಳೆಗೆ ಮುಂದೂಡಿದೆ.

ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟವನ್ನು ಹೆಚ್ಚಿಸಲು ಶಿಕ್ಷಣ ಇಲಾಖೆ ಮೌಲ್ಯಾಂಕನ ಪರೀಕ್ಷೆ ನಡೆಸಲು ಮುಂದಾಗಿದ್ದು, ಇಂದು ಹೈಕೋರ್ಟ್ ನಲ್ಲಿ ಮೇಲ್ಮನವಿ ವಿಚಾರಣೆ ನಡೆದಿದೆ. ಹೈಕೋರ್ಟ್ ನ ವಿಭಾಗೀಯ ಪೀಠವು ಪರೀಕ್ಷೆ ನಡೆಸಲು ಅನುಮತಿ ನೀಡಿದರೆ ರಾಜ್ಯ ಪಠ್ಯಕ್ರಮ ಬೋಧಿಸುತ್ತಿರುವ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮೌಲ್ಯಾಂಕನ ಪರೀಕ್ಷೆ ನಡೆಸಬೇಕಾಗುತ್ತದೆ. ಒಂದು ವೇಳೆ ಅನುಮತಿ ನೀಡದಿದ್ದರೆ, ಮಂಡಳಿ ಪರೀಕ್ಷೆ ಬದಲಾಗಿ ಆಯಾ ಶಾಲ ಹಂತದಲ್ಲಿಯೇ ಪರೀಕ್ಷೆ ನಡೆಸಲಾಗುತ್ತದೆ.

RELATED ARTICLES  ಬೀಚ್ ನಲ್ಲಿ ಕಣ್ಮರೆಯಾದ ವಿದ್ಯಾರ್ಥಿಯ ಮೃತದೇಹ ಪತ್ತೆ

ಮೌಲ್ಯಾಂಕನ ಕಾರ್ಯ ಮುಂದೂಡಿಕೆ

ಬೆಂಗಳೂರು: 2022-23ನೇ ಸಾಲಿನಲ್ಲಿ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ (5th and 8th School Students ) ನಡೆಸಲು ಉದ್ದೇಶಿಸಲಾಗಿದ್ದಂತ ಮೌಲ್ಯಾಂಕನ ಕಾರ್ಯವನ್ನು ಈಗಾಗಲೇ ಮುಂದೂಡಿಕೆ ಮಾಡಿ, ಶಿಕ್ಷಣ ಇಲಾಖೆ ಆದೇಶಿಸಿದೆ.

RELATED ARTICLES  ಯುವತಿಯೊಂದಿಗೆ ಅಸಭ್ಯ ವರ್ತನೆ ತೋರಿದ ಅಪ್ರಾಪ್ತ ಬಾಲಕ

ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಆದೇಶ ಹೊರಡಿಸಲಾಗಿದ್ದು, ಹೈಕೋರ್ಟ್ ಆದೇಶದಂತೆ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಮಾ.13ರಿಂದ ನಿಗದಿ ಪಡಿಸಲಾಗಿದ್ದಂತ ಮೌಲ್ಯಾಂಕನವನ್ನು ಮುಂದೂಡಲಾಗಿದೆ. ನ್ಯಾಯಾಲಯವು ಅನುಮತಿಸಿದಲ್ಲಿ ಈ ಮೌಲ್ಯಾಂಕನವನ್ನು ನಡೆಸುವ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದಿದ್ದಾರೆ.ಈ ಮೌಲ್ಯಾಂಕನವು ವಿದ್ಯಾರ್ಥಿಗಳ ಕಲಿಕಾ ಮಟ್ಟ, ಕಲಿಕಾ ನ್ಯೂನ್ಯತೆಗಳು ಹಾಗೂ ಯಾವ ವಿಷಯದಲ್ಲಿ ಹಿನ್ನಡೆಯುಂಟಾಗಿದೆ ಎಂಬುದನ್ನು ತಿಳಿಯುವುದಾಗಿದೆ. ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣಗೊಳಿಸುವುದು ಈ ಮೌಲ್ಯಾಂಕನದ ಉದ್ದೇಶವಾಗಿರುವುದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದೆ.