ರಾಜ್ಯ ಸರ್ಕಾರಕ್ಕೆ 5 ಮತ್ತು 8 ನೇ ತರಗತಿ ಪಬ್ಲಿಕ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಗ್ರೀನ್ ಸಿಗ್ನಲ್
ನೀಡಿದೆ. 5 ಮತ್ತು 8 ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಇಂದು ಇದರ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ 5 ಮತ್ತು 8 ನೇ ತರಗತಿ ಪಬ್ಲಿಕ್ ಪರೀಕ್ಷೆ ನಡೆಸಲು ಅನುಮತಿ ನೀಡಿದೆ. 10 ದಿನ ಬಿಟ್ಟು ಪರೀಕ್ಷೆ ನಡೆಸಲು ಸೂಚಿಸಿದೆ.
5 ಮತ್ತು 8ನೇ ತರಗತಿಯ ಬೋರ್ಡ್ ಪರೀಕ್ಷೆ (Board exams) ರದ್ದು ಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠದಿಂದ ಆದೇಶ ಹೊರಡಿಸಿತ್ತು, ನಿಯಮಗಳಿಗನುಸಾರ ಮುಂದಿನ ಶೈಕ್ಷಣಿಕ ವರ್ಷದಿಂದ ಬೋರ್ಡ್ ಪರೀಕ್ಷೆ ನಡೆಸಬಹುದು ಎಂದು ಶಿಕ್ಷಣ ಇಲಾಖೆಗೆ ನ್ಯಾ.ಪ್ರದೀಪ್ ಸಿಂಗ್ ಯೆರೂರ್ ಅಭಿಪ್ರಾಯ ವ್ಯಕ್ತಪಡಿಸಿದ್ದರು.
ಮಾ.13ರಿಂದ 5, 8ನೇ ತರಗತಿ ಪರೀಕ್ಷೆಗಳು ಆರಂಭವಾಗಬೇಕಿತ್ತು. ಆದರೆ ಪಬ್ಲಿಕ್ ಪರೀಕ್ಷೆ ನಡೆಸದಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದ ಹಿನ್ನೆಲೆ ಪರೀಕ್ಷೆ ನಿಂತಿತ್ತು. ಈ ಶೈಕ್ಷಣಿಕ ವರ್ಷದಿಂದ 5, 8ನೇ ತರಗತಿ ಪಬ್ಲಿಕ್ ಪರೀಕ್ಷೆ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿತ್ತು. 5 ಮತ್ತು 8ನೇ ತರಗತಿಯ ವಾರ್ಷಿಕ ಪರೀಕ್ಷೆ ವಿರೋಧಿಸಿ ಪೋಷಕರ ಸಂಘಟನೆ ಕೋರ್ಟ್ ಮೊರೆ ಹೋಗಿದ್ದು, ಬೋರ್ಡ್ ಎಕ್ಸಂಗೆ ತಡೆ ನೀಡುವ ಮೂಲಕ ಹೈಕೋರ್ಟ್ ಶಿಕ್ಷಣ ಇಲಾಖೆಗೆ ಬಿಗ್ ಶಾಕ್ ನೀಡಿತ್ತು.