ಕಾರವಾರ: ಮದ್ಯ ಸಾಗಿಸುತ್ತಿದ್ದ ಲಾರಿಗೆ ಅದಿರು ಸಾಗಾಟ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಅದಿರು ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಕಾರವಾರದ ರಾಷ್ಟ್ರೀಯ ಹೆದ್ದಾರಿ 66ರ ತೋಡೂರು ಗ್ರಾಮದ ಬಳಿ ಈ ಘಟನೆ ಸಂಭವಿಸಿದ್ದು, ರೂಪೇಶ ಪಾಟೀಲ್(23) ಮೃತ ಪಟ್ಟಿರುವುದಾಗಿ ತಿಳಿದುಬಂದಿದೆ.ಮೃತ ದುರ್ದೈವಿಯನ್ನು ಬೆಳಗಾವಿ ಜಿಲ್ಲೆಯ ಖಾನಾಪುರ ನಿವಾಸಿ ರೂಪೇಶ ಎಂದು ಗುರುತಿಸಲಾಗಿದೆ.
ಗೋವಾದಿಂದ ಅಂಕೋಲಾದತ್ತ ತೆರಳುತ್ತಿದ್ದ ಲಾರಿಗಳು ಬೆಳಗಿನ ಜಾವ ನಿದ್ದೆ ಮಂಪರಿನಲ್ಲಿ ಮುಂಬದಿ ತೆರಳುತ್ತಿದ್ದ ಮದ್ಯ ಸಾಗಾಟ ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಲಾರಿ ನುಜ್ಜುಗುಜ್ಜಾಗಿ ಮದ್ಯದ ಬೊಕ್ಸಗಳು ರಸ್ತೆ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.ಸ್ಥಳಕ್ಕೆ ಕಾರವಾರ ಗ್ರಾಮೀಣ ಠಾಣಾ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಕ್ರೇನ್ ಮೂಲಕ ಲಾರಿಗಳ ತೆರವು ಕಾರ್ಯಾಚರಣೆ ಮಾಡಲಾಗಿದೆ. ಕಾರವಾರ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.