ಕಾರವಾರ: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಕರಾವಳಿ, ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ, ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ, ದಕ್ಷಿಣ ಒಳನಾಡಿನಲ್ಲಿ ಇಂದು, ನಾಳೆ ಭಾರಿ ಮಳೆಯಾಗಲಿದೆ. ಅದೇ ರೀತಿ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರದಲ್ಲಿ ಗುಡುಗು ಸಹಿತ ಮಳೆಯಾಗುವ ಭಾರಿ ಮಳೆಯಾಗುವ ಸಾಧ್ಯತೆ ಇದೆ.