ಹೊನ್ನಾವರ: ಓಶೋಕಾಯಿ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಮತ್ತು ಕಾಲೇಜು ಮೈಸೂರಿನಲ್ಲಿ ಆಯೋಜಿಸಿದ್ದ ನೊಬೆಲ್ ವರ್ಲ್ಡ್ ರೆಕಾರ್ಡ್ ಸ್ಪರ್ಧೆಯಲ್ಲಿ ತಾಲೂಕಿನ ಮಲ್ನಾಡ್ ಪ್ರೊಗ್ರೆಸ್ಸಿವ್ ಎಜ್ಯುಕೇಶನ್ ಸೊಸೈಟಿಯ ಸೆಂಟ್ರಲ್ ಶಾಲೆಯ ವಿದ್ಯಾರ್ಥಿ ಋತ್ವಿಕ್ ಮೇಸ್ತಾ ಗಮನಾರ್ಹ ಸಾಧನೆ ಮಾಡಿದ್ದಾನೆ.

RELATED ARTICLES  250 ದಿನಗಳನ್ನು ಯಶಸ್ವಿಯಾಗಿ ಪೂರೈಸಿದೆ ‘ಗೋಕರ್ಣ ಗೌರವ’

ಈತ ಆರನೇ ತರಗತಿ ವಿದ್ಯಾರ್ಥಿಯಾಗಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ 1.36 ಸೆಕೆಂಡಿನಲ್ಲಿ 1000 ಹೆಂಚುಗಳನ್ನು ಒಡೆಯುವ ಸ್ಪರ್ಧೆಯಲ್ಲಿ ವಿಶ್ವದಾಖಲೆಯೊಂದಿಗೆ ಚಿನ್ನದ ಪದಕ ಹಾಗೂ ಪ್ರಮಾಣ ಪತ್ರವನ್ನು ಪಡೆದಿದ್ದಾನೆ.

ಇವನು ಕರಾಟೆ ಶಿಕ್ಷಕ ಪ್ರಭಾಕರ ಗೌಡ ಅವರಲ್ಲಿ ತರಬೇತಿ ಪಡೆದಿದ್ದಾನೆ. ಇವನ ಈ ಸಾಧನೆಗೆ ಎಂ.ಪಿ.ಇ. ಸೊಸೈಟಿಯ ಆಡಳಿತ ಮಂಡಳಿ ಅಧ್ಯಕ್ಷರು, ಸರ್ವ ಸದಸ್ಯರು, ಶಾಲಾ ಪ್ರಾಂಶುಪಾಲರು, ಎಲ್ಲಾ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ಹಾಗೂ ಪಾಲಕರು ಅಭಿನಂದನೆ ಸಲ್ಲಿಸಿದ್ದಾರೆ.

RELATED ARTICLES  ಯಕ್ಷಗಾನ ತಜ್ಞೆ ಡಾ. ವಿಜಯನಳಿನಿ ರಮೇಶ್ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ