2022-23ನೇ ಸಾಲಿನ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಗಳು ಮುಕ್ತಾಯವಾಗಿವೆ. ವಿದ್ಯಾರ್ಥಿಗಳು ಹಾಗೂ ಪೋಷಕರು ಈಗ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಈ ಬಾರಿಯ ಫಲಿತಾಂಶ ಕೊಂಚ ವಿಳಂಭವಾಗುವ ಸಾಧ್ಯತೆ ಇದೆ. ಚುನಾವಣೆ ಕಾರ್ಯಗಳಿಗೆ ಪಿಯು ಉಪನ್ಯಾಸಕರನ್ನು ನಿಯೋಜನೆ ಮಾಡಿರುವ ಹಿನ್ನಲೆಯಲ್ಲಿ ಈ ಬಾರಿ ದ್ವಿತೀಯ ಪಿಯುಸಿ ಮೌಲ್ಯಮಾಪನ ಪ್ರಕ್ರಿಯೆ ವಿಳಂಭವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ(ಕೆಎಸ್‌ಇಎಬಿ) ದ್ವಿತೀಯ ಪಿಯು ಮೌಲ್ಯಮಾಪನ ಪ್ರಕ್ರಿಯೆಯನ್ನು ಏಪ್ರಿಲ್ 5 ರಿಂದ ಆರಂಭಿಸಲು ತಿಳಿಸಿದೆ. ಅಂದಾಜು 23 ಸಾವಿರ ಮೌಲ್ಯಮಾಪಕರು ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕಿತ್ತು.
ಆದರೆ, ಇದರಲ್ಲಿ ಶೇಕಡ 30 ರಷ್ಟು ಸಿಬ್ಬಂದಿ ಲಭ್ಯವಾಗುವುದಿಲ್ಲ ಎಂದು ತಿಳಿದುಬಂದಿದೆ. ಸಾಮಾನ್ಯವಾಗಿ ಪಿಯು ಮೌಲ್ಯಮಾಪನವು 20 ದಿನಗಳಲ್ಲಿ ಪೂರ್ಣಗೊಳ್ಳುತ್ತಿತ್ತು. ಈ ಬಾರಿ ಕನಿಷ್ಠ ಒಂದು ತಿಂಗಳು ಸಮಯ ಬೇಕಾಗಬಹುದು ಎಂದು ಹೇಳಲಾಗುತ್ತಿದೆ. ಈ ಪರಿಸ್ಥಿತಿಯಿಂದ ಪಾರಾಗಲು ಮಂಡಳಿಯ ಖಾಸಗಿ ಉಪನ್ಯಾಸಕರನ್ನು ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ತೊಡಗಿಸಲು ಆಲೋಚಿಸುತ್ತಿದೆ ಎಂದು ತಿಳಿದು
ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನ ಕೇಂದ್ರಗಳು ಆಯಾ ಜಿಲ್ಲೆಯಲ್ಲಿಯೇ ಇರುವುದರಿಂದ ಚುನಾವಣಾ ತರಬೇತಿಯ ಬಿಸಿ ಎಸ್‌ಎಸ್‌ಎಲ್‌ಸಿ ಶಿಕ್ಷಕರಿಗೆ ಹೆಚ್ಚು ತಟ್ಟುವುದಿಲ್ಲ. ಆದರೆ, ದ್ವಿತೀಯ ಪಿಯು ಮೌಲ್ಯಮಾಪನ ವಿಕೇಂದ್ರಿಕರಣವಾಗಿದ್ದು, ತರಬೇತಿ ಮತ್ತು ಮೌಲ್ಯಮಾಪನಕ್ಕೆ ಪ್ರತ್ಯೇಕ ಜಿಲ್ಲೆಗಳಿಗೆ ಹೋಗಬೇಕಿದೆಹೋಗಬೇಕಿದೆ.
ಇದರಿಂದ ಬಹುತೇಕ ಮೌಲ್ಯಮಾಪಕರು ಮೌಲ್ಯಮಾಪನ ಕೆಲಸದಿಂದ ವಿನಾಯಿತಿ ಕೇಳಲು ನಿರ್ಧರಿಸಿದ್ದು, ಇದು ಮೌಲ್ಯಮಾಪಕರ ಕೊರತೆಗೆ ಕಾರಣವಾಗಲಿದೆ. ಇದರಿಂದ ಮೌಲ್ಯಮಾಪನ ಕಾರ್ಯ ವಿಳಂಬವಾಗುವ ಸಾಧ್ಯತೆಗಳಿವೆ.