ಸಿದ್ದಾಪುರ : ಹಳಿಯಾಳ ದಿಂದ ಶಿರಸಿ ಮೂಲಕ ಸಾಗರಕ್ಕೆ ಹೋಗುತ್ತಿದ್ದ ಸರಕಾರಿ ಬಸ್ ಸಿದ್ದಾಪುರ ತಾಲೂಕಿನ 16ನೇ ಮೈಲಕಲ್ ಹತ್ತಿರ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ತಾಲೂಕಿನಲ್ಲಿ ನಡೆದಿದೆ. ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ದೊಡ್ಡ ಅನಾಹುತವೇನು ಸಂಭವಿಸಿಲ್ಲ ಎನ್ನಲಾಗಿದೆ. ಬಸ್ಸಿನಲ್ಲಿ ಒಟ್ಟು 44 ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಣಾಪಾಯದಿಂದ ಪಾರಾಗಿದ್ದಾರೆ.

RELATED ARTICLES  ಕುಮಟಾಕ್ಕೆ ದೊರೆತಿಲ್ಲ ನಯಾ ಪೈಸೆ ಅನುದಾನ : ಸದನದಲ್ಲಿ ಧ್ವನಿ ಎತ್ತಿದ ಶಾಸಕ ದಿನಕರ ಶೆಟ್ಟಿ

ಚಾಲಕನ ನಿಯಂತ್ರಣ ತಪ್ಪಿ ಗಿಡಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎನ್ನಲಾಗಿದ್ದು, ಪ್ರತ್ಯಕ್ಷದರ್ಶಿಗಳು ಹೇಳುವ ಪ್ರಕಾರ ಬಸ್‌ ನ ಸ್ಟೇರಿಂಗ್ ಕಟ್ಟಾಗಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುವಿಗೆ ಚಿಕಿತ್ಸೆಗಾಗಿ ಸಿದ್ದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ .

RELATED ARTICLES  ಮತ್ತೆ ಬಂದಿದೆ ಕನ್ನಡ ರಾಜ್ಯೋತ್ಸವ: ಕನ್ನಡಿಗರು ಚಿಂತಿಸಬೇಕಾದ ವಿಚಾರ ಏನು?