ನ್ಯೂಯಾರ್ಕ್: ನೀಲಿಚಿತ್ರ ನಟಿಗೆ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಬಂಧಿಸಿದ ಕೆಲವೇ ಗಂಟೆಗಳಲ್ಲಿ ಬಿಡುಗಡೆ ಮಾಡಿದ್ದಾರೆ. ಮ್ಯಾನ್ ಹಾಟನ್ ಜಿಲ್ಲಾ ಅಟಾರ್ನಿಯ ಕೋರ್ಟ್ ಸಭಾಂಗಣದಲ್ಲಿ ಟ್ರಂಪ್ ಶರಣಾದರು. ಬಳಿಕ ಅವರನ್ನು ಬಂಧಿಸಿದ ಪೊಲೀಸರು ಬಿಗಿ ಭದ್ರತೆಯಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ವಿಚಾರಣೆ ಬಳಿಕ ಅವರನ್ನು ಬಿಡುಗಡೆಗೊಳಿಸಲಾಯಿತು.

RELATED ARTICLES  ಕನ್ನಡದ ಕವಿ, ಕತೆಗಾರ, ಲೇಖಕ ಜಯಂತ್​ ಕಾಯ್ಕಿಣಿಗೆ ಪ್ರತಿಷ್ಠಿತ ಡಿಎಸ್​ಸಿ ಪ್ರಶಸ್ತಿ.

ಈ ವೇಳೆ ಟ್ರಂಪ್ ವಿರುದ್ಧ ಲೈಂಗಿಕ ಪ್ರಕರಣ ಮುಚ್ಚಿಡಲು ಹಣ ನೀಡಿದ್ದು, ಸೇರಿದಂತೆ ಹಣ ವಂಚನೆಯ 34 ದೋಷಾರೋಪಗಳನ್ನು ಹೊರಿಸಲಾಯಿತು. ಕಾನೂನು ಸಲಹಾ ಸಿಬ್ಬಂದಿ ಜೊತೆ ಬಂದಿದ್ದ ಟ್ರಂಪ್, ನಾನು ತಪ್ಪು ಮಾಡಿಲ್ಲ. 34 ಆರೋಪಗಳಲ್ಲಿ ನಾನು ನಿರಪರಾಧಿ ಎಂದಿದ್ದಾರೆ.

RELATED ARTICLES  ಶಿರಸಿಯಲ್ಲಿ ವಿದ್ಯುತ್ ವ್ಯತ್ಯಯ

ಸುಮಾರು ಒಂದು ಗಂಟೆ ಕಾಲ ವಿಚಾರಣೆ ನಡೆಯಿತು. ವಿಚಾರಣೆಯ ನಂತರ ಟ್ರಂಪ್, ತಮ್ಮ ವಾಹನದಲ್ಲಿ ವಿಮಾನ ನಿಲ್ದಾಣಕ್ಕೆ ತೆರಳಿದರು. ಈ ಮೂಲಕ ಅಮೆರಿಕದ ಇತಿಹಾಸದಲ್ಲೇ ಕ್ರಿಮಿನಲ್ ಆರೋಪ ಪ್ರಕರಣದ ವಿಚಾರಣೆ ಎದುರಿಸಿ ಬಂಧನಕ್ಕೆ ಒಳಗಾದ ಮೊದಲ ಅಮೆರಿಕದ ಮಾಜಿ ಅಧ್ಯಕ್ಷರಾಗಿದ್ದಾರೆ.