ಬೆಂಗಳೂರು : ಶಿವಮೊಗ್ಗ ಮೂಲದ ವಕೀಲರೊಬ್ಬರು ಚುನಾವಣೆ ಮುಗಿಯುವ ತನಕ ಕಿಚ್ಚ ಸುದೀಪ್ ಅವರ ಸಿನಿಮಾಗಳ ಪ್ರದರ್ಶನವನ್ನು ನಿಷೇಧಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸುದೀಪ್ ಬಿಜೆಪಿಗೆ ತಮ್ಮ ಬೆಂಬಲ ನೀಡಿದ ಕೆಲವೇ ಗಂಟೆಗಳಲ್ಲಿ ವಕೀಲ ಕೆ.ಪಿ. ಶ್ರೀಪಾಲ್ ಅವರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

RELATED ARTICLES  ಹಿಂದೂ ಧ್ವಜ,ಟೋಪಿ, ಬಂಟಿಂಗ್ಸ ,ಟೀ ಶರ್ಟ,ಓಂ ಕುರ್ತಾ ಇವುಗಳೆಲ್ಲವನ್ನೂ ತಯಾರಿಸಿಕೊಡುವ ಸ್ಯಾರ್ಫನ್ ಪ್ರಮೋಟರ್ಸ: ಗಣೇಶ ಹಬ್ಬಕ್ಕೆ ಅಗತ್ಯ ಸಾಮಗ್ರಿಗೆ ಸಂಪರ್ಕಿಸಿ.

ಸುದೀಪ್ ಅವರ ಚಲನಚಿತ್ರಗಳು ಮತ್ತು ಕಾರ್ಯಕ್ರಮಗಳು ಮತದಾರರ ಮನಸ್ಸಿನ ಮೇಲೆ ನೇರವಾಗಿ ಪರಿಣಾಮ ಬೀರುತ್ತವೆ ಎಂದು ಮಾದರಿ ನೀತಿ ಸಂಹಿತೆಯನ್ನು ಉಲ್ಲೇಖಿಸಿ ಅವರು ಹೇಳಿಕೆ ನೀಡಿದ್ದಾರೆ.

ಚುನಾವಣೆ ಹಿನ್ನೆಲೆ ಬಿಜೆಪಿ ಪಕ್ಷವು ತನ್ನ ಸ್ಟಾರ್ ಪ್ರಚಾರಕರಾಗಿ ಹಲವಾರು ಕನ್ನಡ ನಟರನ್ನು ಆಹ್ವಾನಿಸಿದ್ದು, ಅವರಲ್ಲಿ ಕಿಚ್ಚ ಸುದೀಪ್ ಅವರು ಕೂಡ ಒಬ್ಬರು.

RELATED ARTICLES  ರಾಮಚಂದ್ರಾಪುರ ಮಠಕ್ಕೆ ಮಹತ್ವದ ಗೆಲುವು: ನಕಲಿ ಅಶ್ಲೀಲ ಸಿಡಿ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ

ಕಲ್ಯಾಣ-ಕರ್ನಾಟಕ ಪ್ರದೇಶದ ಮೇಲೆ ವಿಶೇಷ ಗಮನ ಹರಿಸಿರುವ ನಟ ರಾಜ್ಯಾದ್ಯಂತ ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ ಎನ್ನಲಾಗಿದೆ.