ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಹಾಗೂ ಭಾರತೀಯ ಚಿತ್ರರಂಗದ ಖ್ಯಾತ ನಟಿ ಖುಷ್ಬೂ ಸುಂದರ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಭಿಮಾನಿಗಳಲ್ಲಿ ಆತಂಕ ಶುರುವಾಗಿದೆ. ಜ್ವರ ಮತ್ತು ಸುಸ್ತಿನಿಂದ ನಟಿ ಖುಷ್ಬೂ ಆಸ್ಪತ್ರೆಗೆ ದಾಖಲಾಗಿದ್ದು, ಈ ಸುದ್ದಿಯನ್ನು ಅವರೇ ತಮ್ಮ ಸೋಶಿಯಲ್ ಮೀಡಿಯಾ ಹ್ಯಾಂಡಲ್ನಲ್ಲಿ ಹಂಚಿಕೊಂಡಿದ್ದಾರೆ.
ಈ ದಿನಗಳಲ್ಲಿ ಅವರು ತೀವ್ರ ಜ್ವರ ಮತ್ತು ನೋವಿನಿಂದ ಬಳಲುತ್ತಿದ್ದಾರೆ. ಅರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಖುಷ್ಬೂ ತಮ್ಮ ಟ್ವಿಟರ್ ಮತ್ತು Instagramನಲ್ಲಿ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ.
ಅಭಿಮಾನಿಗಳು ತಮ್ಮ ಆರೋಗ್ಯವನ್ನು ಗಂಭೀರವಾಗಿ ಪರಿಗಣಿಸುವಂತೆ ಮತ್ತು ಎಚ್ಚರಿಕೆಯ ಚಿಹ್ನೆಗಳನ್ನು ನಿರ್ಲಕ್ಷಿಸದಂತೆ ಅವರು ಸಲಹೆ ನೀಡಿದ್ದಾರೆ.
ವಿಪರೀತ ಜ್ವರ, ತುಂಬಾ ನೋವು ಮತ್ತು ದೌರ್ಬಲ್ಯ ನನ್ನನ್ನು ಕೊಲ್ಲುತ್ತಿದೆ. ಆದ್ರೆ ನಾನು ಹೈದರಾಬಾದ್ನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ದಯವಿಟ್ಟು ಆರೋಗ್ಯ ನಿರ್ಲಕ್ಷಿಸಬೇಡಿ ಎಂದು ಖುಷ್ಬೂ ಬರೆದುಕೊಂಡಿದ್ದಾರೆ.
ಹಿರಿಯ ನಟಿ ಖುಷ್ಬೂ ಆಸ್ಪತ್ರೆಗೆ ದಾಖಲಾಗಿರುವ ವಿಚಾರ ತಿಳಿಯುತ್ತಿದ್ದಂತೆ, ಅಭಿಮಾನಿಗಳು ಆತಂಕ ಹೊರಹಾಕಿದ್ದಾರೆ. ಆದ್ರೆ ನನ್ನ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ನಾನು ಹುಷಾರಾಗಿದ್ದೇನೆ ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.