ಕಾರವಾರ : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಕೆಗೆ ಇನ್ನು 2 ದಿನ ಮಾತ್ರ ಬಾಕಿ ಇರುವಾಗ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ರಾಜ್ಯದ 31 ಜಿಲ್ಲೆಗಳ ಒಟ್ಟು 224 ವಿಧಾನಸಭಾ ಕ್ಷೇತ್ರದಲ್ಲಿನ ಮೊದಲ ಪಟ್ಟಿಯಲ್ಲಿ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ.
ಈ ಮೂಲಕ 35 ಕ್ಷೇತ್ರಗಳ ಪಟ್ಟಿಯನ್ನು ಉಳಿಸಿಕೊಂಡಿದೆ. ಜೊತೆಗೆ 52 ಕ್ಷೇತ್ರದಲ್ಲಿ ಹೊಸ ಮುಖಗಳಿಗೆ ಟಿಕೆಟ್ ನೀಡಲಾಗಿದೆ. ಒಬಿಸಿಗೆ 32 ಟಿಕೆಟ್, ಎಸ್‌ಸಿ ಕಳೆದ 4 ದಿನಗಳಿಂದ ಬಿಜೆಪಿ ಹೈಕಮಾಂಡ್ ಮೇಲಿಂದ ಮೇಲೆ ಸಿಇಸಿ ಸಭೆಗಳನ್ನು ಮಾಡಿತ್ತು. ಹಲವು ಸಭೆಗಳ ಬಳಿಕ ಮೊದಲ ಪಟ್ಟಿಯಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಇಂದು ಬಿಡುಗಡೆ ಮಾಡಿದೆ. ಈ ಬಾರಿ ಹೊಸಬರಿಗೆ ಬಿಜೆಪಿ ಮಣೆ ಹಾಕಿದ್ದು, ಹಳಬರಿಗೆ ಕೋಕ್ ನೀಡಲಾಗಿದೆ. ಈ ಮೂಲಕ ಬಿಜೆಪಿ ಯುವನಾಯಕರತ್ತ ಚಿತ್ತ ಹರಿಸಿದೆ. ಗ್ರಾಮ ಮಟ್ಟದಿಂದ ರಾಜ್ಯ ನಾಯಕರ ತನಕ ಅಭಿಪ್ರಾಯ ಸಂಗ್ರಹಿಸಿ ಲಿಸ್ಟ್ ತಯಾರಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಹೇಳಿಕೆ ನೀಡಿದ್ದಾರೆ.
ಉತ್ತರಕನ್ನಡದಲ್ಲಿ ಯಾವುದೇ ಬದಲಾವಣೆಯಿಲ್ಲದೆ ಕಾರವಾರ ರೂಪಾಲಿ ನಾಯ್ಕ, ಕುಮಟಾದಲ್ಲಿ ದಿನಕರ ಶೆಟ್ಟಿ, ಭಟ್ಕಳ ಸುನೀಲ್ ನಾಯ್ಕ, ಶಿರಸಿ ವಿಶ್ವೇಶ್ವರ ಹೆಗಡೆ ಕಾಗೇರಿ, ಯಲ್ಲಾಪುರ ಶಿವರಾಮ ಹೆಬ್ಬಾರ್, ಹಳಿಯಾಳ ಸುನೀಲ್ ಹೆಗಡೆ ಗೆ ಟಿಕೆಟ್ ಘೋಷಣೆಯಾಗಿದೆ.