ಹೊನ್ನಾವರ : ಶರಾವತಿ ಸೇತುವೆ ಮೇಲಿಂದ ಇಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಸೇತುವೆ ಪಕ್ಕ ಇಬ್ಬರ ಚಪ್ಪಲಿ ಹಾಗೂ ಬ್ಯಾಗ್, ಬಸ್ ಪ್ರಯಾಣದ ಟಿಕೇಟ್ ಪತ್ತೆ ಆಗಿವೆ. ಹೊನ್ನಾವರದ ಶರಾವತಿ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದವರ ಹುಡುಕಾಟ ನಡೆಸಿದ್ದು, ಯುವತಿಯ ಶವ ಪತ್ತೆಯಾಗಿದ್ದು, ನದಿಯಿಂದ ಹೊರ ತೆಗೆಯಲಾಗಿದೆ. ಇನ್ನೊಬ್ಬರ ಹುಡುಕಾಟ ಮುಂದುವರಿದಿದೆ.

RELATED ARTICLES  ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.

ರಾತ್ರಿ ವೇಳೆ ಆಗಿದ್ದರಿಂದ ಜನದಟ್ಟಣೆ ಕಡಿಮೆ ಇರುವ ಕಾರಣಕ್ಕೆ ಇಬ್ಬರು ಸೇತುವೆ ಮೇಲಿಂದ ನದಿಗೆ ಹಾರಿದ್ದಾರೆ ಎನ್ನಲಾಗಿದೆ. ಇಬ್ಬರು ಪ್ರೇಮಿಗಳು ಇರಬಹುದು ಎಂಬ ಶಂಕೆ ಇದೆ. ಯುವತಿಯ ಶವವು ಶರಾವತಿ ನದಿಗೆ ಹೊಂದಿಕೊoಡಿರುವ ಟೊಂಕ ಸಮೀಪ ಸಿಕ್ಕಿದ್ದು, ಇನ್ನೊಬ್ಬರ ಪತ್ತೆ ಕಾರ್ಯ ಮುಂದುವರೆದಿದೆ.

RELATED ARTICLES  ಭೀಕರ ಅಪಘಾತ : ಯುವತಿ ಸಾವು.

ಸೇತುವೆ ಬಳಿ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದು, ಸ್ಥಳಕ್ಕೆ ಹೊನ್ನಾವರ ಸಿ.ಪಿ.ಐ. ಮಂಜುನಾಥ ಇ.ಓ, ಪಿಎಸೈ ಪ್ರವೀಣಕುಮಾರ, ಅಗ್ನಿಶಾಮಕ ಹಾಗೂ ಪೊಲೀಸ್ ಸಿಬ್ಬಂದಿಗಳು ಕಾರ್ಯಚರಣೆ ಮುಂದುವರೆಸಿದ್ದಾರೆ.