ಅಂಕೋಲಾ: ಭಾರತೀಯ ಜನತಾ ಪಕ್ಷದಿಂದ ಕಾರವಾರ ಅಂಕೋಲಾ ಕ್ಷೇತ್ರದ ಅಭ್ಯರ್ಥಿಯಾಗಿ ಹಾಲಿ ಶಾಸಕಿ ರೂಪಾಲಿ ನಾಯ್ಕ್ ತಮ್ಮ ನಾಮಪತ್ರ ಸಲ್ಲಿಸಿದರು. ನಗರದ ಮಾಲಾದೇವಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಸಹಸ್ರಾರು ಸಂಖ್ಯೆಯ ಕಾರ್ಯಕರ್ತರ ಹರ್ಷೋದ್ಗಾರಗಳ ನಡುವೆ ಮೆರವಣಿಗೆಯಲ್ಲಿ ನಗರಸಭೆ ಆವರಣದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಗೆ ಆಗಮಿಸಿ, ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಈ ವೇಳೆ ಗೋವಾ ಮುಖ್ಯ ಮಂತ್ರಿ ಪ್ರಮೋದ ಸಾವಂತ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ಇನ್ನಿತರರು ಉಪಸ್ಥಿತರಿದ್ದರು.
ನಾಮಪತ್ರ ಸಲ್ಲಿಸಿದ ಸೈಲ್.
ಕಾರವಾರ: ಎರಡನೇ ಬಾರಿ ಕಾರವಾರ – ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಸೈಲ್ ಕಣಕ್ಕಿಳಿದಿದ್ದಾರೆ. ಸಾವಿರಾರು ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಪಕ್ಷದ ಪ್ರಮುಖರು ಭಾಗಿಯಾಗಿದ್ದರು.
ವಿ.ಎಸ್ ಪಾಟೀಲ್ ನಾಮಪತ್ರ ಸಲ್ಲಿಕೆ.
ಯಲ್ಲಾಪುರ: ವಿಧಾನಸಭಾ ಚುನಾವಣಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದು, ಇಂದು ಯಲ್ಲಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್ ನಾಮಪತ್ರ ಸಲ್ಲಿಸಿದ್ದಾರೆ. ನೂರಾರು ಬೆಂಬಲಿಗರೊಂದಿಗೆ ಯಲ್ಲಾಪುರ ಗ್ರಾಮದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಕಾರ್ಯಕರ್ತರೊಂದಿಗೆ ತಹಶಿಲ್ದಾರ ಕಚೇರಿಯವರೆಗೂ ಮೆರವಣಿಗೆ ನಡೆಸಿ, ನಾಮಪತ್ರ ಸಲ್ಲಿಸಿದ್ದಾರೆ.
ಭೀಮಣ್ಣ ನಾಯ್ಕ ನಾಮಪತ್ರ ಸಲ್ಲಿಕೆ.
ಇಂದು ಶಿರಸಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ್ ನಾಮಪತ್ರ ಸಲ್ಲಿಸಿದ್ದಾರೆ. ಇಲ್ಲಿನ ಮಾರಿಕಾಂಬಾ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ಸಾಗಿ ಉಪವಿಭಾಗಾಧಿಕಾರಿ ಕಛೇರಿಗೆ ತೆರಳಿ ಉಪವಿಭಾಗಾಧಿಕಾರಿ ದೇವರಾಜ್ ಆರ್.ಅವರಿಗೆ ನಾಮಪತ್ರ ಸಲ್ಲಿಸಿದರು. ಕ್ಷೇತ್ರದ ಮೂಲೆ ಮೂಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ, ಮೆರವಣಿಗೆಯಲ್ಲಿ ಪಾಲ್ಗೊಂಡ ಪಕ್ಷದ ಕಾರ್ಯಕರ್ತರು
ಅಭ್ಯರ್ಥಿಗಳ ಪರವಾಗಿ ಘೋಷಣೆ ಕೂಗಿದರು.