ಕುಮಟಾ : ಈ ಸಲದ ಚುನಾವಣೆಗೆ ಕಾಂಗ್ರೆಸ್ ನಿಂದ ಟಿಕೆಟ್ ಸಿಗುವ ಬಗ್ಗೆ ಭಾರೀ ನಿರೀಕ್ಷೆ ಹೊಂದಿದ್ದ ಹಾಗೂ ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಿವೇದಿತ್ ಆಳ್ವಾ ಅವರನ್ನು ಘೋಷಣೆ ಮಾಡಿದ ನಂತರದಲ್ಲಿ ಬಂಡಾಯ ಸಾರಿದ್ದ, ಶಿವಾನಂದ ಹೆಗಡೆ ಕಡತೋಕಾ ನಾಡಿದ್ದು (ಏ. 20) ರಂದು ನಾಮಪತ್ರ ಸಲ್ಲಿಸಲಿದ್ದಾರೆ.

RELATED ARTICLES  ವಲಯ ಮಟ್ಟದ ಪ್ರತಿಭಾ ಕಾರಂಜಿ ಲಯನ್ಸ ಶಾಲೆಗೆ ಸಮಗ್ರ ಪ್ರಶಸ್ತಿ:

ಈ ಹಿಂದಿನಿಂದಲೂ ಕಾಂಗ್ರೆಸ್ ಪಕ್ಷದ ಪ್ರಮುಖರಲ್ಲಿ ಒಬ್ಬರೆನಿಸಿಕೊಂಡು, ಪಕ್ಷ ಸಂಘಟನೆ ಹಾಗೂ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಹೊನ್ನಾವರ ಭಾಗದಲ್ಲಿ ಅತಿ ಹೆಚ್ಚಿನ ಅಭಿಮಾನಿಗಳನ್ನು ಇವರು ಹೊಂದಿದ್ದಾರೆ. ಹವ್ಯಕ ಸಮಾಜದ ವಿವಿಧ ಸಂಘಟನೆಗಳಲ್ಲಿ ತಮ್ಮನ್ನ ತೊಡಗಿಸಿಕೊಂಡು ಜನಪ್ರಿಯತೆಗಳಿಸಿದ್ದಾರೆ.

RELATED ARTICLES  ಕರಾವಳಿ ಭಾಗದಲ್ಲಿ ಹೈ ವೇವ್ ಅಲರ್ಟ್ ಘೋಷಣೆ

ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ನಂತರ ಒಂದೆರಡು ದಿನಗಳಲ್ಲಿ ತಮ್ಮ ನಿರ್ಣಯವನ್ನು ಘೋಷಿಸುವುದಾಗಿ ತಿಳಿಸಿದ್ದ ಇವರು. ಅಭಿಮಾನಿಗಳು ಹಾಗೂ ಪಕ್ಷದ ನಡೆಯಿಂದ ಬೇಸತ್ತಿರುವ ಅನೇಕ ಪಕ್ಷದ ಪ್ರಮುಖರ ನಿರ್ಣಯದಂತೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವುದಾಗಿ ಘೋಷಣೆ ಮಾಡಿದ್ದಾರೆ.