ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾಪಾರ್ಟಿ ಅಭ್ಯರ್ಥಿ ದಿನಕರ ಶೆಟ್ಟಿಯವರು ಇಂದು ಹೊನ್ನಾವರ ಮಂಡಲ ಹೊಸಾಕುಳಿ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡರು.
ಹೊನ್ನಾವರ ಮಂಡಲ ಬಿಜೆಪಿ ಅಧ್ಯಕ್ಷ ರಾಜು ಭಂಡಾರಿ, ವಿಧಾನಸಭಾ ಕ್ಷೇತ್ರದ ಚುನಾವಣಾ ಸಂಚಾಲಕರಾದ ಎಮ್. ಜಿ. ಭಟ್, ಮಹಾಶಕ್ತಿಕೇಂದ್ರದ ಅಧ್ಯಕ್ಷ ರವಿ ಹೆಗಡೆ, ಗ್ರಾಮಪಂಚಾಯತ್ ಅಧ್ಯಕ್ಷೆ ರಜನಿ ನಾಯ್ಕ, ಜಿಲ್ಲಾ ಪ್ರಮುಖರಾದ ಎಂ. ಎಸ್. ಹೆಗಡೆ ಕಣ್ಣಿ, ಕಡ್ಲೆ ಗ್ರಾಮಪಂಚಾಯತ್ ಅಧ್ಯಕ್ಷ ಗೋವಿಂದ ಗೌಡ, ಶಕ್ತಿಕೇಂದ್ರದ ಅಧ್ಯಕ್ಷ ಶಿವ ಭಟ್, ಪಂಚಾಯತ್ ಸದಸ್ಯರುಗಳು, ಬೂತ್ ಕಮಿಟಿ ಅಧ್ಯಕ್ಷರು ಹಾಗೂ ಸದಸ್ಯರು, ಪೇಜ್ ಪ್ರಮುಖರು, ಪಕ್ಷದ ಅಭಿಮಾನಿಗಳು ಉಪಸ್ಥಿತರಿದ್ದರು.
ಸಾಲಕೋಡ್ ಶಕ್ತಿಕೇಂದ್ರದ ಪ್ರಮುಖರೊಂದಿಗೆ ಚರ್ಚೆ.
ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾಪಾರ್ಟಿ ಅಭ್ಯರ್ಥಿ ದಿನಕರ ಶೆಟ್ಟಿಯವರು ಇಂದು ಹೊನ್ನಾವರ ಮಂಡಲ ಸಾಲಕೋಡ್ ಶಕ್ತಿಕೇಂದ್ರದ ಹೊಯ್ನೀರಿನ ಕೃಷ್ಣ ಹೆಗಡೆ ಅವರ ಮನೆಯಲ್ಲಿ ಹಾಗೂ ಸಾಲ್ಕೋಡ್ ರಾಮ ನಾಗಪ್ಪ ನಾಯ್ಕ್ ಅವರ ಮನೆಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡರು.
ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ದಿನಕರ ಶೆಟ್ಟಿಯವರು ಸಾಲ್ಕೋಡ್ ಪಂಚಾಯತ್ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗೆ ಕಳೆದ ಐದು ವರ್ಷಗಳಲ್ಲಿ ದಾಖಲೆಯ ಪ್ರಮಾಣದಲ್ಲಿ ಅನುದಾನವನ್ನು ಒದಗಿಸಲಾಗಿದೆ. ರಸ್ತೆಗಳು, ಸೇತುವೆಗಳು ನಿರ್ಮಾಣಗೊಂಡಿದ್ದು, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ವಿಶೇಷ ಕಾಳಜಿವಹಿಸಿ ನಮ್ಮ ಸರ್ಕಾರವು ಕೆಲಸಮಾಡಿದೆ. ಪ್ರಮುಖವಾಗಿ ಶರಾವತಿ ಕುಡಿಯುವ ನೀರಿನ ಯೋಜನೆ, ಹೊನ್ನಾವರದ ಪ್ರಥಮದರ್ಜೆ ಕಾಲೇಜು, ಹೊಸ ಬಸ್ ನಿಲ್ದಾಣ, ಆರ್. ಟಿ. ಓ. ಆಫೀಸ್ ಗೆ ಜಾಗ ಮಂಜೂರಿ, ತಾಲೂಕಾ ಆಸ್ಪತ್ರೆಯ ಸುಧಾರಣೆ ಸೇರಿದಂತೆ ಇನ್ನೂ ಅನೇಕ ಕಾರ್ಯಗಳು ಈ ಐದು ವರ್ಷಗಳಲ್ಲಿ ನೆರವೇರಿವೆ. ಇವೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಬಿಜೆಪಿಗೆ ಮತ್ತೊಮ್ಮೆ ಬೆಂಬಲಿಸುವ ಮೂಲಕ ಮತದಾರರು ಡಬಲ್ ಎಂಜಿನ್ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಹೇಳಿದರು.
ಹೊನ್ನಾವರ ಮಂಡಲ ಬಿಜೆಪಿ ಅಧ್ಯಕ್ಷ ರಾಜು ಭಂಡಾರಿ, ವಿಧಾನಸಭಾ ಕ್ಷೇತ್ರದ ಚುನಾವಣಾ ಸಂಚಾಲಕರಾದ ಎಮ್. ಜಿ. ಭಟ್, ಮಹಾಶಕ್ತಿಕೇಂದ್ರದ ಅಧ್ಯಕ್ಷ ರವಿ ಹೆಗಡೆ, ಗ್ರಾಮಪಂಚಾಯತ್ ಅಧ್ಯಕ್ಷೆ ರಜನಿ ನಾಯ್ಕ, ಜಿಲ್ಲಾ ಪ್ರಮುಖರಾದ ಎಂ. ಎಸ್. ಹೆಗಡೆ ಕಣ್ಣಿ, ಮಂಡಲದ ರೈತಮೋರ್ಚಾ ಸಂಚಾಲಕ ನಾರಾಯಣ ಎಸ್. ಹೆಗಡೆ, ಶಕ್ತಿಕೇಂದ್ರದ ಪ್ರಮುಖರಾದ ಶಿವರಾಮ ಹೆಗಡೆ, ಕಡ್ಲೆ ಗ್ರಾಮಪಂಚಾಯತ್ ಅಧ್ಯಕ್ಷ ಗೋವಿಂದ ಗೌಡ, ಪಂಚಾಯತ್ ಸದಸ್ಯರುಗಳು, ಬೂತ್ ಕಮಿಟಿ ಅಧ್ಯಕ್ಷರು ಹಾಗೂ ಸದಸ್ಯರು, ಪೇಜ್ ಪ್ರಮುಖರು, ಪಕ್ಷದ ಅಭಿಮಾನಿಗಳು ಉಪಸ್ಥಿತರಿದ್ದರು.