ಕುಮಟಾ : ಒಂದೆಡೆ ಚುನಾವಣಾ ಕಣ ರಂಗಿರುತ್ತಿದ್ದು ಅಭ್ಯರ್ಥಿಗಳು ದೇವಸ್ಥಾನಗಳಿಗೆ ಭೇಟಿ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುವ ಕಾರ್ಯವನ್ನೂ ನಡೆಸುತ್ತಿದ್ದಾರೆ. ಜೆಡಿಎಸ್ ಅಭ್ಯರ್ಥಿ ಸೂರಜ್ ನಾಯ್ಕ ಸೋನಿ ದಂಪತಿ ಸಮೇತ ಶ್ರೀ ಶಾಂತೇರಿ ಕಾಮಾಕ್ಷಿ ದೇವಸ್ಥಾನದಲ್ಲಿ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಶ್ರೀಮದ್ ವಿದ್ಯಾಧೀಶತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಮಂತ್ರಾಕ್ಷತೆಯನ್ನು ಸ್ವೀಕರಿಸಿ ಆಶೀರ್ವಾದ ಪಡೆದರು. ನಿರಂತರವಾಗಿ ವಿವಿಧ ಕಡೆಗೆ ಕ್ಯಾಂಪೇನ್ ಗಳ ಮೂಲಕ ಚುನಾವಣಾ ಪ್ರಚಾರದ ಭರಾಟೆಯಲ್ಲಿರುವವರು ಗೆಲುವಿಗಾಗಿ ಗುರುಗಳ ಆಶೀರ್ವಾದವನ್ನು ಬೇಡಿಕೊಂಡರು.