ಯಲ್ಲಾಪುರ : ಖಾಸಗಿ ಬಸ್ ಹಾಗೂ ಇನೋವಾ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಬಸ್ ಪಲ್ಟಿಯಾಗಿ 40ಕ್ಕೂ ಹೆಚ್ಚು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಆರತಿಬೈಲ್ ಕ್ರಾಸ್ ಬಳಿ ನಡೆದಿದೆ.

ಯಲ್ಲಾಪುರ ಕಡೆಯಿಂದ ಗೋಕರ್ಣ ಪ್ರವಾಸಕ್ಕೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಮಂಗಳೂರಿನಿಂದ ಮುಂಬೈ ಕಡೆ ಚಲಿಸುತ್ತಿದ್ದ ಇನೋವಾ ನಡುವೆ ಅಪಘಾತವಾಗಿದೆ. ಅಪಘಾದಿಂದಾಗಿ ಖಾಸಗಿ ಬಸ್ ಹೆದ್ದಾರಿಯ ಪಕ್ಕದಲ್ಲಿ ಪಲ್ಟಿಯಾಗಿದ್ದು, ಬಸ್ ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ
ಪಾರಾಗಿದ್ದಾರೆ.

RELATED ARTICLES  ಮುಂಗಾರು ತಂದ ಅವಾಂತರ: ಹೊನ್ನಾವರದ ಹಲವೆಡೆ ಮನೆ ಕೊಟ್ಟಿಗೆಗಳಿಗೆ ಹಾನಿ.

ಮಹಾರಾಷ್ಟ್ರದಿಂದ 40ಕ್ಕೂ ಹೆಚ್ಚು ಪ್ರವಾಸಿಗರು ಖಾಸಗಿ ಬಸ್ ಮೂಲಕ ಗೋಕರ್ಣ,ಮುರುಡೇಶ್ವರ ಪ್ರವಾಸಕ್ಕೆ ಬಂದಿದ್ದರು ಎನ್ನಲಾಗಿದೆ.

ಇನ್ನೂ ಇನ್ನೋವಾ ಕಾರನಲ್ಲಿದ್ದವರು ಮಂಗಳೂರಿನಿಂದ ಕುಟುಂಬ ಸಮೇತರಾಗಿ ಮುಂಬೈಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಇನ್ನೋವಾ ಕಾರನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

RELATED ARTICLES  ಹೊಲನಗದ್ದೆ ಶಾಲೆಗೆ ಕಂಪ್ಯೂಟರ್ ಕೊಡುಗೆ.