ಕುಮಟಾ : ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಬಿ. ಕೆ. ಭಂಡಾರಕರ್ಸ ಸರಸ್ವತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳು JEE (Main) – 2023 ರಲ್ಲಿ ಉತ್ತಮ ಗುಣಮಟ್ಟದ ಸಾಧನೆಯನ್ನು ಮಾಡಿ ಸಂಸ್ಥೆಯ ಗರಿಮೆಯನ್ನು ಹೆಚ್ಚಿಸಿದ್ದಾರೆ. 

RELATED ARTICLES  ಗುರುಸೇವೆ , ಸಮಾಜಸೇವೆಯಲ್ಲಿ ಮಾದರಿಯಾಗಿ ರಾಜಗೋಪಾಲ ಕೈಪ್ಪಂಗಳ.


ರಂಜಿತಾ ನಾಯಕ್, ಆಕಾಂಕ್ಷಾ ಅಂಬಿಗ, ಸಿಂಧು ಎಮ್, ಪ್ರಜ್ವಲ್ ಗಾವಂಕರ, ಇವರುಗಳು ಇತ್ತೀಚಿಗೆ ನಡೆದ ರಾಷ್ಟ್ರ ಮಟ್ಟದ ಜೆಇಇ ಮೇನ್ [JEE(MAIN)-2023] ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿ ಮುಂದಿನ ಹಂತದ ಜೆಇಇ ಅಡ್ವಾನ್ಸ್ [JEE(Advance)-2023]  ಪರೀಕ್ಷೆಗೆ ಆಯ್ಕೆಗೊಂಡು ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ.

RELATED ARTICLES  ಬದುಕಿಗೆ ಬಣ್ಣ ತುಂಬಿದವರು

ಕೊಂಕಣ ಎಜುಕೇಶನ್ ಟ್ರಸ್ಟ್ ನ ಪದಾಧಿಕಾರಿಗಳು, ವಿಧಾತ್ರಿ ಅಕಾಡೆಮಿಯ ಸಹಸಂಸ್ಥಾಪಕರಾದ ಗುರುರಾಜ ಶೆಟ್ಟಿಯವರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವರ್ಗದವರು ವಿದ್ಯಾರ್ಥಿಗಳ ಈ ಸಾಧನೆಗೆ ಹರ್ಷವನ್ನು ವ್ಯಕ್ತಪಡಿಸಿ ಮುಂದಿನ ಹಂತದ ಪರೀಕ್ಷೆಗಳಿಗೆ ಶುಭ ಹಾರೈಸಿದ್ದಾರೆ.