ಬೆಂಗಳೂರು: 2022-23 ಸಾಲಿನ ಎಸೆಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡರೆ ಯಾದಗೀರಿ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ. ಈ ಬಾರಿ ಕರಾವಳಿ ಜಿಲ್ಲೆಗಳು ನಂಬರ್ ಒನ್ ಸ್ಥಾನದಿಂದ ವಂಚಿತಗೊಂಡಿವೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧಿಕಾರಿಗಳು ಫಲಿತಾಂಶ ಪ್ರಕಟಿಸಿದರು.’ಶೇ.83.89ರಷ್ಟು ವಿದ್ಯಾರ್ಥಿಗಳು ಉತ್ತೀರ್ಣಗೋಂಡಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625 ಅಂಕ ಪಡೆದಿದ್ದಾರೆ’ ಎಂದು ಮಾಹಿತಿ ನೀಡಿದರು.
ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದರೆ, ಎರಡನೇ ಸ್ಥಾನದಲ್ಲಿ ಮಂಡ್ಯ ಜಿಲ್ಲೆ ಹಾಗೂ ಹಾಸನ ಜಿಲ್ಲೆ 3ನೇ ಸ್ಥಾನದಲ್ಲಿದೆ. ಇನ್ನು ಯಾದಗಿರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದರು.
ಮಾ.31ರಿಂದ ಎ.15ರವರೆಗೆ ಎಸೆಸೆಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈಗ ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯಗೊಂಡಿತ್ತು.