ಕುಮಟಾ : ಬಹಿರಂಗ ಪ್ರಚಾರದ ಕೊನೆಯ ದಿನವಾದ ಇಂದು ಕಾಂಗ್ರೆಸ್ ಅಭ್ಯರ್ಥಿ ನಿವೇದಿತ ಆಳ್ವಾ ಕುಮಟಾ ಪಟ್ಟಣದಲ್ಲಿ ಪಾದಯಾತ್ರೆ ನಡೆಸಿ ಜನರ ಮತ ಯಾಚಿಸಿದರು. ನಾಡಿದ್ದು ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸುವಂತೆ ಅವರು ಮನವಿ ಮಾಡಿಕೊಂಡರುಮ
ತಾಲೂಕಿನ ಹೃದಯ ಭಾಗದಲ್ಲಿರುವ ಶ್ರೀಶಾಂತಿಕಾ ಪರಮೇಶ್ವರಿ ದೇವಾಲಯದಿಂದ ಹೊರಟು ಕುಮಟಾ ಪಟ್ಟಣ ಮಾರ್ಗವಾಗಿ ಹಳೆ ಬಸ್ ನಿಲ್ದಾಣದ ಮೂಲಕ ಮಾಸ್ತಿ ಕಟ್ಟೆಯ ವರೆಗೆ ಬಂದು ಪಾದಯಾತ್ರೆ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರುಗಳು ಹಾಗೂ ಕಾರ್ಯರ್ತರು ನಿವೇದಿತ್ ಜೊತೆಗೆ ಹೆಜ್ಜೆ ಹಾಕಿದರು.