ಗೋಕರ್ಣ : ರೂಢಿಗತ ಪರಂಪರೆಯಂತೆ ಗಂಗಾಷ್ಟಮಿಯ ಪರ್ವಕಾಲದಲ್ಲಿ ಬೆಳಿಗ್ಗೆ 6 ಗಂಟೆಗೆ ಸರಿಯಾಗಿ ಶಿವಗಂಗಾ ವಿವಾಹ ನಿಶ್ಚಿತಾರ್ಥ ತಾಂಬೂಲೋತ್ಸವವು ಶ್ರೀ ಕ್ಷೇತ್ರ ಗೋಕರ್ಣದ ಸಮೀಪದ ಗಂಗಾವಳಿಯಲ್ಲಿರುವ ಶ್ರೀ ಗಂಗಾಮಾತಾ ದೇವಾಲಯದಲ್ಲಿ ದಿನಾಂಕ 12-10-2017 ಗುರುವಾರ (ಅಶ್ವಿನ ಕೃಷ್ಣ ಸಪ್ತಮಿ ) ಜರುಗಲಿದೆ.
ಇದಕ್ಕೆ ಪೂರ್ವಭಾವಿಯಾಗಿ ಹಿಂದಿನ ದಿನ ರಾತ್ರೆ ಸುಮಾರು 12 ಗಂಟೆಗೆ ಶ್ರೀ ಮಹಾಬಲೇಶ್ವರ ದೇವಾಲಯದಿಂದ ಶ್ರೀ ದೇವರ ಉತ್ಸವವು ಸಕಲ ಬಿರುದು ಬಾವಲಿಗಳೊಡನೆ ವಾದ್ಯಘೋಷದೊಂದಿಗೆ ಗಂಗಾವಳಿಗೆ ಹೋಗಿ ಬೆಳಿಗ್ಗೆ ನೇಸರ ಮೂಡುವ ಪೂರ್ವಕಾಲದಲ್ಲಿಯೇ ಗಂಗಾವಳಿ ನದಿಯಲ್ಲಿ ಸ್ನಾನ ಮಾಡಿಗಂಗಾಮಾತಾ ದೇವಾಲಯಕ್ಕೆ ಉತ್ಸವವು ಹೋಗುತ್ತದೆ.
ಆ ಸಮಯದಲ್ಲಿ ಗಂಗೆಯ ಉದ್ಭವ ಆಗುವುದು ವಿಶೇಷವಾಗಿರುತ್ತದೆ. ಆಗ ಅಲ್ಲಿ ಸಹಸ್ರಾರು ಸಂಖ್ಯೆಯಲ್ಲಿಭಕ್ತ ಜನರು ಸೇರುತ್ತಾರೆ. ಅವರೆಲ್ಲರ ಸಮ್ಮುಖದಲ್ಲಿ ಶಿವ-ಗಂಗೆಯರ ಸಂವಾದ ಜರುಗುತ್ತದೆ .
ನಂತರ ಗಂಗಾಮಾತೆಯು ಮಹಾಬಲೇಶ್ವರನನ್ನು ಮದುವೆಯಾಗುವುದಾಗಿ ನಿಶ್ಚಿತಾರ್ಥ ತಾಂಬೂಲೋತ್ಸವವು ಜರುಗುತ್ತದೆ.