ಭಟ್ಕಳ: ಈ ಬಾರಿಯ ಭಟ್ಕಳ ಹೊನ್ನಾವರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಕಾಳ್ ವೈದ್ಯ 30 ಸಾವಿರ ಅಧಿಕ ಅಂತರ ಮತಗಳಿಂದ ಭರ್ಜರಿಯಾಗಿ ಗೆಲುವು ಸಾಧಿಸುವ ಮೂಲಕ 2ನೇ ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಕಳೆದ 2013 ವಿಧಾನಸಭಾ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಮಂಕಾಳ್ ವೈದ್ಯ ಮೊದಲ ಬಾರಿಗೆ ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿ ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುದರೊಂದಿಗೆ 5 ವರ್ಷ ಆಡಳಿತ ನಡೆಸಿದರು. ನಂತರ ಮತ್ತೆ 2018 ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಸುನೀಲ ನಾಯ್ಕ ವಿರುದ್ಧ ಸ್ಪರ್ಧಿಸಿದ 5 ಸಾವಿರ ಮತಗಳ ಅಂತರದಲ್ಲಿ ಸೋಲನ್ನು ಅನುಭವಿಸಿದರು. ಮತ್ತೆ 2023 ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅಭಿಮಾನಿಗಳ ಹಾಗೂ ಕಾರ್ಯಕರ್ತರ ಬೆಂಬಲದಿಂದ ಸ್ಪರ್ಧಿಸಿದ ಮಂಕಾಳ್ ವೈದ್ಯ ಬಿಜೆಪಿ ಅಭ್ಯರ್ಥಿ ಸುನೀಲ ನಾಯ್ಕರನ್ನು 30 ಸಾವಿರಕ್ಕೂ ಅಧಿಕ ಅಂತರದ ಮತಗಳಿಂದ ಸೋಲಿಸುದರೊಂದಿಗೆ ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದ ಚಿಕ್ಕಾಣಿ ಹಿಡಿದಿದ್ದಾರೆ