ಯಲ್ಲಾಪುರ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಯಲ್ಲಾಪುರ ಕ್ಷೇತ್ರದಿಂದ ಭಾಜಪ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿವರಾಮ ಹೆಬ್ಬಾರ್ ಗೆಲುವು ಸಾಧಿಸಿದ್ದು, ಈ ಹಿನ್ನೆಲೆಯಲ್ಲಿ ಯಲ್ಲಾಪುರ ಪಟ್ಟಣದಲ್ಲಿ ಶನಿವಾರ ಸಂಜೆ ವಿಜಯೋತ್ಸವ ಆಚರಿಸಲಾಯಿತು.

ಶಾಸಕ ಶಿವರಾಮ ಹೆಬ್ಬಾರ್ ಯಲ್ಲಾಪುರ ಪಟ್ಟಣದ ಗ್ರಾಮದೇವಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ತೆರೆದ ವಾಹನದಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಭಾರಿ ಸಂಖ್ಯೆಯಲ್ಲಿ ಸೇರಿದ್ದ ಸಾರ್ವಜನಿಕರು, ಅಭಿಮಾನಿಗಳು, ನೂತನ ಶಾಸಕರಿಗೆ ಅಭಿನಂದನೆ ಸಲ್ಲಿಸಿದರು.

RELATED ARTICLES  ಜನಸಾಮಾನ್ಯರ ಜೀವನದ ಮೇಲೆ ಬರೆ ಎಳೆಯುತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಇಂದು ಕುಮಟಾ ಬ್ಲಾಕ್ ಕಾಂಗ್ರೆಸ್ ಕುಮಟಾ ವತಿಯಿಂದ ಪ್ರತಿಭಟನೆ.

ಈ ಸಂದರ್ಭದಲ್ಲಿ ವನಜಾಕ್ಷಿ ಶಿವರಾಮ ಹೆಬ್ಬಾರ್, ಯುವ ನಾಯಕ ವಿವೇಕ್ ಹೆಬ್ಬಾರ್, ಮಂಡಲಾಧ್ಯಕ್ಷರಾದ ಗೋಪಾಲಕೃಷ್ಣ ಎನ್.ಗಾಂವ್ಕರ್, ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ವಿಜಯ ಮಿರಾಶಿ ಸೇರಿದಂತೆ ಪಕ್ಷದ ವಿವಿಧಸ್ಥರದ ಪದಾಧಿಕಾರಿಗಳು, ಸ್ಥಳೀಯ ಮುಖಂಡರು, ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.

RELATED ARTICLES  ಆತ್ಮಲಿಂಗ ಪೂಜೆ ನೆರವೇರಿಸಿದ ಬಸವರಾಜ ಸ್ವಾಮಿಗಳು