ವಿಧಾನಸಭಾ ಚುನಾವಣೆಯಲ್ಲಿ ಕುಮಟಾ ಹೊನ್ನಾವರ ಕ್ಷೇತ್ರದಿಂದ ಐತಿಹಾಸಿಕ ಗೆಲುವನ್ನು ದಾಖಲಿಸಿದ ಮಾನ್ಯ ದಿನಕರ ಶೆಟ್ಟಿಯವರು ಭಾರತೀಯ ಜನತಾ ಪಾರ್ಟಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಹೊನ್ನಾವರದಲ್ಲಿ ಅದ್ಧೂರಿ ವಿಜಯೋತ್ಸವದ ಮೆರವಣಿಗೆಯಲ್ಲಿ ಪಾಲ್ಗೊಂಡರು.
ಭಾರತೀಯ ಜನತಾ ಪಾರ್ಟಿಯ ಹೊನ್ನಾವರ ಮಂಡಲಾಧ್ಯಕ್ಷ ರಾಜು ಭಂಡಾರಿ, ಕುಮಟಾ ಮಂಡಲಾಧ್ಯಕ್ಷ ಹೇಮಂತಕುಮಾರ ಗಾಂವಕರ, ರಾಷ್ಟ್ರೀಯ ಪರಿಷತ್ ಸದಸ್ಯ ಎಮ್. ಜಿ. ನಾಯ್ಕ್, ಪಟ್ಟಣ ಪಂಚಾಯತ್ ಅಧ್ಯಕ್ಷೆ ಭಾಗ್ಯ ಲೋಕೇಶ್, ಉಪಾಧ್ಯಕ್ಷೆ ನಿಶಾ ಶೇಟ್, ಮಾಜಿ ಅಧ್ಯಕ್ಷ ಶಿವರಾಜ್ ಮೇಸ್ತ, ಪಟ್ಟಣ ಪಂಚಾಯತ್ ಸದಸ್ಯರು, ಗ್ರಾಮಪಂಚಾಯತ್ ಅಧ್ಯಕ್ಷರುಗಳಾದ ರಜನಿ ನಾಯ್ಕ್, ಜಿ. ಜಿ. ಶಂಕರ್, ಗೋವಿಂದ ಗೌಡ, ಪಕ್ಷದ ಜಿಲ್ಲಾ ಪ್ರಯುಖರಾದ ವಿನೋದ ನಾಯ್ಕ, ಎಮ್. ಎಸ್. ಹೆಗಡೆ ಕಣ್ಣಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ ಹರಿಕಂತ್ರ ಹಾಗೂ ಮಂಜುನಾಥ್ ನಾಯ್ಕ, ನಗರ ಮಹಾಶಕ್ತಿಕೇಂದ್ರದ ಅಧ್ಯಕ್ಷ ಉಮೇಶ ಸಾರಂಗ, ವಿವಿಧ ಸ್ಥರಗಳ ಪದಾಧಿಕಾರಿಗಳು, ಕಾರ್ಯಕರ್ತರು, ಬಿಜೆಪಿ ಅಭಿಮಾನಿಗಳು ಉಪಸ್ಥಿತರಿದ್ದರು.