ಶಿರಸಿ : ಗುರುವಾರ ತಾಲೂಕಿನ ಹುಲೇಕಲ್ ಗ್ರಾಮ ಪಂಚಾಯತ ವ್ಯಾಪ್ತಿಯ ಅಮಚಿಮನೆ ಗ್ರಾಮದ ಭವಾನಿ ಹೆಗಡೆ ಮತ್ತು ಎಮ್.ವಿ.ಹೆಗಡೆ ಅವರಿಗೆ ಸೇರಿದ ೨ ಎಕರೆ ಮಾಲ್ಕಿ ಬೆಟ್ಟ ಮತ್ತು ಅರ್ಧ ಎಕರೆ ಅಡಿಕೆ ತೋಟ ಸುಟ್ಟು ಕರಕಲಾದದ್ದನ್ನು ವೀಕ್ಷಿಸಿ, ನೊಂದ ರೈತರಿಗೆ ಶಾಸಕ ಭೀಮಣ್ಣ ನಾಯ್ಕ ಸಾಂತ್ವನ ಹೇಳಿದರು.
ಸ್ಥಳೀಯ ಗ್ರಾಮ ಪಂಚಾಯತ ಮತ್ತು ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಗುರವಾರ ಬೆಳಿಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸುವುದಾಗಿ ಭರವಸೆ ನೀಡಿದೆ ಪಂಚನಾಮೆ ಮಾಡಿ ತಕ್ಷಣ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಾಜಿ ಸ್ಪೀಕರ್ ಕಾಗೇರಿ ಭೇಟಿ.
ಶಿರಸಿ ತಾಲೂಕಿನ ಹುಲೇಕಲ್ ಗ್ರಾಮ ಪಂಚಾಯತ ವ್ಯಾಪ್ತಿಯ ಅಮಚಿಮನೆ ಗ್ರಾಮದ ಎಮ್.ವಿ.ಹೆಗಡೆ ಮತ್ತು ಭವಾನಿ ಹೆಗಡೆ ಅವರಿಗೆ ಸೇರಿದ ಅಡಿಕೆ ತೋಟ ಮತ್ತು ಮಾಲ್ಕಿ ಬೆಟ್ಟ ಬೆಂಕಿ ಅವಗಡದಿಂದ ಹಾನಿ ಅಗಿದ್ದನ್ನು ವೀಕ್ಷಿಸಿ, ನೊಂದ ರೈತರಿಗೆ ಧೈರ್ಯ ಹೇಳಿದೆನು.