ಹೊನ್ನಾವರ : ಗ್ಯಾಸ್ ತುಂಬಿದ ಟ್ಯಾಂಕರ್ ಒಂದು ಪಲ್ಟಿಯಾಗಿ ಸಣ್ಣ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆ ಆಗುತ್ತಿರುವ ಘಟನೆ ಹೊನ್ನಾವರ ತಾಲೂಕಿನ ಶರಾವತಿ ಸರ್ಕಲ್ ಸಮೀಪ ನಡೆದಿದೆ.
ಮಂಗಳೂರು ಕಡೆಯಿಂದ ಅಂಕೋಲಾ ಕಡೆ ಚಲಿಸುತ್ತಿದ್ದ ಟ್ಯಾಂಕರ್,ಪಟ್ಟಣದ ಶರಾವತಿ ಸರ್ಕಲ್ ಬಳಿ ಪಲ್ಟಿಯಾಗಿದೆ. ಇದರಿಂದಾಗಿ ಟ್ಯಾಂಕರ್ ಚಾಲಕನಿಗೆ ಗಂಭೀರವಾಗಿ ಗಾಯವಾಗಿದ್ದು, ಆತನಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಇನ್ನೂ ಟ್ಯಾಂಕರ್ ಪಲ್ಟಿ ಆಗಿರುವುದರಿಂದ ಟ್ಯಾಂಕರ್ ನಲ್ಲಿದ್ದ ಅನಿಲ್ ಸೋರಿಕೆ ಆಗುತ್ತಿದೆ.
ಅನಿಲ ಸೋರಿಕೆ ಆಗುತ್ತಿರುವುದನ್ನ ತಿಳಿದ ಹೊನ್ನಾವರ ಪೊಲೀಸರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಈಗಾಗಲೇ ಘಟನಾ ಸ್ಥಳಕ್ಕೆ ಹೊನ್ನಾವರ,ಕುಮಟಾ ಅಗ್ನಿಶಾಮಕ ದಳದ ಸಿಬ್ಬಂದಿಗಳು ಭೇಟಿ ನೀಡಿ ಹೆಚ್ಚಿನ ಅನಾಹುತ ಆಗದಂತೆ ಪ್ರಯತ್ನಿಸುತ್ತಿದ್ದಾರೆ.
ಇನ್ನೂ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿರುವುದರಿಂದ ಉಳಿದ ವಾಹನಗಳ ಸಂಚಾರದಲ್ಲಿ ಸಮಸ್ಯೆ ಉಂಟಾಗಿದೆ.