ಅಂಕೋಲಾ: ಖ್ಯಾತ ವಿಮರ್ಶಕ ಜಿ.ಹೆಚ್.ನಾಯಕ್ (88) ಅವರು ವಿಧಿವಶರಾಗಿದ್ದಾರೆ. ಅವರಿಗೆ ಪತ್ನಿ ಮೀರಾ ನಾಯಕ್, ಪುತ್ರಿ ಕೀರ್ತಿ ಹಾಗೂ ಮೊಮ್ಮಕ್ಕಳು ಇದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಇಂದು (ಮೇ.26) ಮೈಸೂರಿನ ಕುವೆಂಪು ನಗರದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
ಕನ್ನಡ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಾಗಿದ್ದ ಜಿ.ಹೆಚ್. ನಾಯಕ್ ಅವರು ಪಂಪ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದರು.
ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸೂರ್ವೆ ಗ್ರಾಮದವರಾದ ಜಿ.ಹೆಚ್. ನಾಯಕ್ ಅವರು ಮೈಸೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಅಧ್ಯಾಪಕರಾಗಿ, ಮುಂದೆ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಇವರು ನಿವೃತ್ತಿ ಬಳಿಕ ಮೈಸೂರಿನ ಕುವೆಂಪು ನಗರದಲ್ಲಿ ನೆಲೆಸಿದ್ದರು ಎಂದು ವರದಿಯಾಗಿದೆ.