ಅಂಕೋಲಾ : ಫೋಟೋ ಸ್ಟುಡಿಯೋಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿದ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಪಟ್ಟಣದ ಮುಖ್ಯ ರಸ್ತೆಯಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.
ಸಂತೋಷ ನಾಯ್ಕ ಮಾಲಿಕತ್ವದ ಪಟ್ಟಣದ ಅರ್ಭನ ಬ್ಯಾಂಕ್ ಎದುರಿನ ಕಟ್ಟಡದ ಮೊದಲನೇ ಮಹಡಿಯಲ್ಲಿರುವ ಸಂತೋಷ ಸ್ಟುಡಿಯೋಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದ ಪರಿಣಾಮ ಸ್ಟುಡಿಯೋದೊಳಗಿದ್ದ ಕ್ಯಾಮೆರಾ ಕಂಪ್ಯೂಟರ್ ಸ್ಟುಡಿಯೋ ಲೈಟ್ಗಳು ಸೇರಿದಂತೆ ಇನ್ನಿತರ ವಸ್ತುಗಳಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದಲ್ಲಿ ಹಾನಿ ಉಂಟಾಗಿದೆ ಎನ್ನಲಾಗಿದೆ.
ಸಾರ್ವಜನಿಕರು ಸ್ಟುಡಿಯೋದ ಒಳಗಡೆಯಿಂದ ಹೊರಗೆ ಹೊಗೆ ಕಾಣಿಸಿಕೊಂಡಿದ್ದನ್ನು ಗಮನಿಸಿ ಅಗ್ನಿಶಾಮಕ ದಳದವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ,ಆದರೆ ಸ್ಟುಡಿಯೋದೊಳಗಿದ್ದ ಎಲ್ಲ ಬೆಲೆಬಾಳುವ ಸಾಮಾನುಗಳು ಬೆಂಕಿಗಾವತಿಯಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿದ್ದಾರೆ ವರದಿಯಾಗಿದೆ.