ಯಲ್ಲಾಪುರ: ತಾಲೂಕಿನ ಕುಂದರಗಿ ಗ್ರಾ.ಪಂ ವ್ಯಾಪ್ತಿಯ ಭರತನಹಳ್ಳಿಯ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿದ್ದ ಸವಿತಾ ಗೋಂದಿ (38) ಮಾವಿನಕಟ್ಟೆಯ ತಮ್ಮ ಸ್ವಗೃಹದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನೇಕ ವರ್ಷಗಳಿಂದ ಥೈರಾಯ್ಡ್ ಕಾಯಿಲೆಯಿಂದ ಬಳಲುತ್ತಿದ್ದ ಇವರು ಇದನ್ನೇ ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಓರ್ವ ಸಹೋದರ, ಮೂವರು ಸಹೋದರಿಯರು ಹಾಗೂ ತಾಯಿ ಅಲ್ಲದೇ ಅಪಾರ ಸಂಖ್ಯೆಯ ಬಂಧುಬಳಗ, ಶಿಷ್ಯರನ್ನು ಇವರು ಅಗಲಿದ್ದಾರೆ.