ದಾಂಡೇಲಿ: ತಾಲೂಕಿನ ಅಜಗಾಂವ್ ಕ್ರಾಸ್ ಸಮೀಪ ಎರಡು ಲಾರಿಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಚಾಲಕರು ಗಾಯಗೊಂಡ ಘಟನೆ ನಡೆದಿದೆ.
ಹಳಿಯಾಳ ಕಡೆಯಿಂದ ಪೋಲ್ಸ್ ತುಂಬಿಕೊಂಡು ದಾಂಡೇಲಿಗೆ ಬರುತ್ತಿದ್ದ ಟ್ರಕ್ ಮತ್ತು ದಾಂಡೇಲಿಯಿಂದ ಹಳಿಯಾಳದ ಕಡೆಗೆ ಹೋಗುತ್ತಿದ್ದ ಟ್ರಕ್ ಪರಸ್ಪರ ಮುಖಾಮುಖಿ ಡಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಎರಡು ಟ್ರಕ್‍ಗಳ ಚಾಲಕರುಗಳಿಗೆ ಗಾಯವಾಗಿದೆ ಎನ್ನಲಾಗಿದೆ.
ಗಾಯಗೊಂಡವರನ್ನು ತಕ್ಷಣವೇ ಸರಕಾರಿ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.
ಸ್ಥಳಕ್ಕೆ ದಾಂಡೇಲಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ ಎಂದು ವರದಿಯಾಗಿದೆ.