ಕಾರವಾರ : ಕಾಳಿ ಸೇತುವೆಯ ಮೇಲಿಂದ ನದಿಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರವಾರ ನಗರದ ಕೋಡಿ ಭಾಗದಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ರೋಷನ್ ಖಾರ್ಗೇಕರ್ (26) ಎಂದು ಗುರುತಿಸಲಾಗಿದೆ .
ಈ ವ್ಯಕ್ತಿಯು ಕಾರವಾರ ತಾಲೂಕಿನ ಕಡವಾಡದ ನಂದವಾಳ ಗ್ರಾಮದ ನಿವಾಸಿ. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ತಕ್ಷಣ ಸ್ಥಳಕ್ಕೆ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಈ ಪ್ರಕರಣದ ಬಗ್ಗೆ ತನಿಖೆ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ.