ಹೊನ್ನಾವರ : ಪಟ್ಟಣದ ರೈಲ್ವೆ ಸೇತುವೆ ಮೇಲೆ
ಹೊನ್ನಾವರದಿಂದ ಮಾವಿನಕುರ್ವಕ್ಕೆ ನಡೆದುಕೊಂಡು ಹೋಗುತ್ತಿದ್ದಾಗ ವ್ಯಕ್ತಿಯೊಬ್ಬ ರೈಲು ಬಡಿದು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಮಾವಿನಕುರ್ವ ಅಂಗಡಿಹಿತ್ತು ನಿವಾಸಿ ತಿಮ್ಮಣ್ಣ ಚಂದ್ರು ಗೌಡ ಗಂಭೀರ ಗಾಯಗೊಂಡವನಾಗಿದ್ದಾನೆ ಎಂದು ತಿಳಿದುಬಂದಿದೆ.
ತನ್ನ ನಿತ್ಯದ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದಾಗ ರೈಲು ಬಡಿದು ಕೈ ಕಾಲು ಮತ್ತು ತಲೆಗೆ ಗಂಭೀರ ಗಾಯಗೊಂಡು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.
ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಈ. ಘಟನೆಗೆ ಸಂಬಂಧ ಪಟ್ಟಂತೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.