ಬೆಂಗಳೂರು: ಬಾಲ ನಟರಾಗಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದ ಹಾಗೂ ಇತ್ತೀಚೆಗೆ ಹಲವು ಧಾರಾವಾಹಿಗಳ ನಿರ್ದೇಶನ ಮಾಡಿದ್ದ ನಿತಿನ್ ಗೋಪಿ ಹೃದಯಾಘಾತದಿಂದ
ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಸಾಹಸ ಸಿಂಹ ವಿಷ್ಣುವರ್ಧನ್ ನಟನೆಯ ‘ಹಲೋ ಡ್ಯಾಡಿ’ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ಇವರು ಬಾಲನಟರಾಗಿ ಕಾಣಿಸಿಕೊಂಡಿದ್ದರು. ಅದರಲ್ಲೂ ‘ಶಾಲೆಗೆ ಈ ದಿನ ರಾಜಾ’ ಹಾಡಿನ ಮೂಲಕ ಅಸಂಖ್ಯಾತ ಅಭಿಮಾನಿಗಳ ಹೃದಯದಲ್ಲಿ ನೆಲೆಯೂರಿದ್ದರು.

RELATED ARTICLES  ಚುನಾವಣೆ ಮುಗಿಯುತ್ತಿದ್ದಂತೆ ಏರುತ್ತಿದೆ ಪೆಟ್ರೋಲ್, ಡೀಸೆಲ್ ಬೆಲೆ!

ನಿತಿನ್ ಗೋಪಿ ಬೆಂಗಳೂರಿನ ಇಟ್ಟುಮಡುವಿನ ಅಪಾರ್ಟ್ಬಮೆಂಟ್ ನಲ್ಲಿ ವಾಸವಿದ್ದರು. ಬೆಳಗ್ಗೆ ನಾಲ್ಕು ಗಂಟೆಗೆ ಅವರಿಗೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಲಾಗಿತ್ತು. ಆದರೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

RELATED ARTICLES  ಬ್ಯಾಂಕ್‌ ಖಾತೆ ಮತ್ತು ಮೊಬೈಲ್‌ ನಂಬರ್‌ಗೆ ಆಧಾರ್‌ ಕಾರ್ಡ್‌ ಸಂಖ್ಯೆಯನ್ನು ಜೋಡಿಸದೆ ಇದ್ದವರಿಗೆ ಗುಡ್ ನ್ಯೂಸ್.

ಕೇವಲ 39ರ ವಯಸ್ಸಿನ ನಿತಿನ್, ಹೊಸ ಧಾರಾವಾಹಿಯನ್ನು ನಿರ್ದೇಶನ ಮಾಡಲು ಸಿದ್ಧತೆ ನಡೆಸಿದ್ದರು ಎಂದು ಹೇಳಲಾಗುತ್ತಿದೆ. ಇವರು ಖ್ಯಾತ ಕೊಳಲು ವಾದ ಗೋಪಿ ಅವರ ಪುತ್ರ. ನಿತಿನ್ ಅಗಲಿಕೆಗೆ ಕಿರುತೆರೆಯ ಹಲವಾರು ಕಲಾವಿದರು ಮತ್ತು ತಂತ್ರಜ್ಞರು ಕಂಬನಿ ಮಿಡಿಸಿದ್ದಾರೆ.