ಭುವನೇಶ್ವರ: ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಗೂಡ್ಸ್ ರೈಲಿಗೆ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದು 10-12 ಬೋಗಿಗಳು ಹಳಿತಪ್ಪಿದ್ದವು. ಇದರ ಬೆನ್ನಲ್ಲೇ ಯಶವಂತಪುರದಿಂದ ಹೌರಾದೆಡೆಗೆ ಸಾಗುತ್ತಿದ್ದ ಮತ್ತೊಂದು ರೈಲು ಅದೇ ಮಾರ್ಗವಾಗಿ ಸಾಗುತ್ತಿದ್ದಾಗ ಹಳಿ ತಪ್ಪಿದ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಈ ಮೂರು ರೈಲುಗಳ ಸರಣಿ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 280ಕ್ಕೆ ಏರಿಕೆ ಆಗಿದೆ. ಈ ದುರಂತದಲ್ಲಿ 900ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರ ರಕ್ಷಣಾಕಾರ್ಯ ಬಿರುಸಿನಿಂದ ಸಾಗಿದೆ. ಮತ್ತಷ್ಟು ಸಾವು-ನೋವುಗಳ ಆತಂಕ ಎದುರಾಗಿದೆ.

RELATED ARTICLES  ನಿಮ್ಮ ಜನ್ಮರಾಶಿಗೆ ಅನುಗುಣವಾಗಿ (ದಿನಾಂಕ 03-04-2019) ಇಂದಿನ ದಿನ ಫಲಾನುಫಲಗಳು ಹೇಗಿರಲಿದೆ ಗೊತ್ತೆ?

ಈ ದುರ್ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ಮಾಡಿದ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ರೈಲು ಅಪಘಾತದ ತನಿಖೆಗೆ ಉನ್ನತ ಅಧಿಕಾರಿಗಳ ಕಮಿಟಿ ರಚನೆ ಮಾಡಲಾಗುವುದು ಎಂದು ಹೇಳಿದ್ದಾರೆ. ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೂರು ಎನ್‌ಡಿಆರ್ ಎಫ್ ಘಟಕ, 4 ಒಡಿಶಾ ಡಿಸಾಸ್ಟರ್ ಕ್ಯಾಪಿಡ್ ಆ್ಯಕ್ಷನ್ ಫೋರ್ಸ್, 15 ಅಗ್ನಿಶಾಮಕ ತಂಡ, 30 ವೈದ್ಯರ ತಂಡ, 200 ಪೊಲೀಸ್ ಸಿಬ್ಬಂದಿ, 60 ಆ್ಯಂಬುಲೆನ್ಸ್ ರಕ್ಷಣಾ ಕಾರ್ಯದಲ್ಲಿ ನಿರ್ವಹಿಸುತ್ತಿವೆ ಎನ್ನಲಾಗಿದೆ.

RELATED ARTICLES  ಅಕ್ಷರ ಜ್ಞಾನದ ಕೊರತೆಯಿಂದಾಗಿ ಭಾರತವು ಜಗತ್ತಿನಲ್ಲಿ ಹಿಂದುಳಿಯಲಿಕ್ಕೆ ಕಾರಣವಾಗಿದೆ: ಬಾಲಚಂದ್ರ ಜಾರಕಿಹೊಳಿ

ಈ ಸರಣಿ ಅಪಘಾತದಲ್ಲಿ ರೈಲುಗಳ ಬೋಗಿಯೊಳಗಡೆ ಹಲವರು ಸಿಕ್ಕಿಬಿದ್ದಿರುವುದಾಗಿ ವರದಿಗಳು ತಿಳಿಸಿವೆ. ಇನ್ನೂ ಹಲವರು ಸಿಕ್ಕಿ ಬಿದ್ದಿರುವುದರಿಂದ ಸಾವು ನೋವುಗಳ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ವರದಿಯಾಗಿದೆ.