ಕುಮಟಾ : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕುಮಟಾ ನಗರದ ಸಂಘಚಾಲಕರಾಗಿದ್ದ ಹಾಗೂ ಆರ್.ಎಸ್.ಎಸ್ ನ ವಿವಿಧ ಸೇವಾ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಅಶೋಕ ಬಾಳೇರಿ (76) ರವಿವಾರ ಬೆಳಿಗ್ಗೆ 10.30ಕ್ಕೆ ಮಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಕೆಲ ದಿನಗಳಿಂದ ಅನಾರೋಗ್ಯದ ನಿಮಿತ್ತ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಬಾಲ್ಯದಿಂದಲೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿದ್ದು, ಶಾಖೆಯ ಮುಖ್ಯಸ್ಥರಾಗಿ ಹಾಗೂ ಇತರ ಪ್ರಮುಖ ಜವಾಬ್ದಾರಿ ನಿಭಾಯಿಸಿ ಸೇವಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದರು. ಇವರ ಅಗಲುವಿಕೆಗೆ ಶಾಸಕರಾದ ದಿನಕರ ಶೆಟ್ಟಿ ಹಾಗೂ ಸಂಘದ ಪ್ರಮುಖರು ಕಾರ್ಯಕರ್ತರು ಸಂತಾಪ ಸೂಚಿಸಿದ್ದಾರೆ.