ಕುಮಟಾ : ವಿಶ್ವ ಪರಿಸರ ದಿನದ ಅಂಗವಾಗಿ ಸೋಮವಾರ ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಬಿ. ಕೆ. ಭಂಡಾರ್ಕರ್ಸ ಸರಸ್ವತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಗಿಡಗಳನ್ನು ನೆಟ್ಟು ನೀರು ಉಣಿಸುವುದರ ಮೂಲಕ ಅರ್ಥಪೂರ್ಣವಾಗಿ ವಿಶ್ವ ಪರಿಸರ ದಿನವನ್ನು ಆಚರಿಸಿದರು. ನೆಟ್ಟ ಗಿಡಗಳನ್ನು ಆರೈಕೆಮಾಡುವ ಮೂಲಕ ಅವುಗಳ ಉಳಿವಿಗೆ ಪ್ರಯತ್ನಿಸುವ ಹಾಗೂ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚು ಹೆಚ್ಚು ಗಿಡಗಳನ್ನು ನಡುವ ಬಗ್ಗೆ ವಿದ್ಯಾರ್ಥಿಗಳು ಪಣತೊಟ್ಟರು.
ಈ ಸಂದರ್ಭದಲ್ಲಿ ವಿಧಾತ್ರಿ ಅಕಾಡೆಮಿಯ ಸಹ ಸಂಸ್ಥಾಪಕರಾದ ಗುರುರಾಜ ಶೆಟ್ಟಿ, ಪ್ರಾಂಶುಪಾಲರಾದ ಕಿರಣ ಭಟ್ಟ, ಉಪ ಪ್ರಾಂಶುಪಾಲರಾದ ಸುಜಾತಾ ಹೆಗಡೆ ಹಾಗೂ ಉಪನ್ಯಾಸಕರು, ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಹಾಜರಿದ್ದರು.