ಕುಮಟಾ : ತಾಲೂಕಿನ ಸರ್ಕಾರಿ ಆಸ್ಪತ್ರೆಯ ಡಯಾಲಿಸಿಸ್ ನರ್ಸ ಆಗಿ ಕೆಲಸ ನಿರ್ವಹಿಸುತ್ತಿದ್ದ ವೀಣಾ ನಾಗರಾಜ್ (26) ಹೆರವಟ್ಟಾದಲ್ಲಿ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾದ ಘಟನೆ ನಡೆದಿದೆ. ಕೆಲವು ತಿಂಗಳ ಹಿಂದೆ ಮದುವೆಯಾಗಿದ್ದ ಈಕೆ ಕುಮಟಾ ಸರ್ಕಾರಿ ಆಸ್ಪತ್ರೆಯಲ್ಲಿ ಕಾಂಟ್ರೆಕ್ಟ್ ಬೇಸಿಸ್ ನಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು. ಈಕೆಯ ಗಂಡ ಅಕ್ಕಿಆಲೂರಿನ ಖಾಸಗಿ ಕಾಲೇಜಲ್ಲಿ ಪ್ರಾಧ್ಯಾಪಕರಾಗಿದ್ದಾರೆ.
ಬೆಳಗ್ಗೆ 7 ರಿಂದ ಮಧ್ಯಾಹ್ನದವರೆಗೆ ತನ್ನ ಕರ್ತವ್ಯ ನಿರ್ವಹಿಸಿದ್ದ ವೀಣಾ, ನಂತರ ತನ್ನ ಮನೆಗೆ ತೆರಳಿದ್ದಳು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ರೂಂಮ್ ನಲ್ಲಿ ವೇಲ್ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಕುಮಟಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಾವ ಕಾರಣಕ್ಕಾಗಿ ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಬಗ್ಗೆ ನಿಖರ ಕಾರಣ ತಿಳಿದು ಬಂದಿಲ್ಲ.