ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿನ ಶೀರ್ಲೆ ಫಾಲ್ಸ್ ತಿರುವಿನಲ್ಲಿ ಅಕ್ಕಿ ಚೀಲಗಳನ್ನು ಸಾಗಿಸುತ್ತಿದ್ದ ಲಾರಿಯು ಅತಿ ವೇಗ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಹೋಗಿ, ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಲಾರಿಯು ಹೆದ್ದಾರಿಯಲ್ಲಿ ಪಲ್ಟಿಯಾದ ಘಟನೆ ನಡೆದಿದೆ.
ಈ ಘಟನೆಯಲ್ಲಿ ಲಾರಿ ಚಾಲಕ ಗಾಯಗೊಂಡಿದ್ದಾನೆ. ಲಾರಿಯು ಜಕಂಗೊಂಡಿದ್ದು, ಲಾರಿ ಪಲ್ಟಿಯಾದ ಪರಿಣಾಮ ಲಾರಿಯಲ್ಲಿದ್ದ ಅಕ್ಕಿ ಚೀಲಗಳು ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಈ ಕುರಿತಾಗಿ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.