ದಾಂಡೇಲಿ : ನಗರದ ಕವಯತ್ರಿ,ಲೇಖಕಿ ದೀಪಾಲಿ ಸಾಮಂತ್ ಅವರಿಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಮಾಡಿದ ಅನುಪಮ ಸೇವೆಯನ್ನು ಗುರುತಿಸಿ ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ
ವೇದಿಕೆ ವತಿಯಿಂದ ಶ್ರೀಸಿದ್ಧಾರೂಢ ಸದ್ಭಾವನಾ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ ಎಂದು ತಿಳಿದುಬಂದಿದೆ.
ಹುಬ್ಬಳ್ಳಿಯಲ್ಲಿ ನಡೆದ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಸಮಾರಂಭದಲ್ಲಿ ಕವಯತ್ರಿ ಡಾ.ಭಾರತಿ ಹಿರೇಮಠ, ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ
ಡಾ.ಲಿಂಗರಾಜ ಅಂಗಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷರಾದ ಸಂತೋಷ್.ಆರ್.ಶೆಟ್ಟಿ, ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ರಾಜ್ಯಾಧ್ಯಕ್ಷರಾದ ಶಾಲಿನಿ
ರುದ್ರಮುನಿ, ರಾಜ್ಯ ಸಂಚಾಲಕರಾದ ವಾಸು ಸಮುದ್ರವಳ್ಳಿ ಮೊದಲಾದ ಗಣ್ಯರ ಸಮ್ಮುಖದಲ್ಲಿ ಈ ಪ್ರಶಸ್ತಿಯನ್ನು ದೀಪಾಲಿ ಸಾಮಂತ್ ಅವರು ಸ್ವೀಕರಿಸಿದ್ದಾರೆ ಎನ್ನಲಾಗಿದೆ.
ದೀಪಾಲಿ ಸಾಮಂತ್ ಅವರು ಅವರು ಕೇಂದ್ರ ಕನ್ನಡವಸಾಹಿತ್ಯ ವೇದಿಕೆಯ ದಾಂಡೇಲಿ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ಈಗಾಗಲೆ
ಅನೇಕ ಕವಿತೆಗಳು ಮತ್ತು ಲೇಖನಗಳು ಕನ್ನಡ ಸಾರಸ್ವತ ಲೋಕದಲ್ಲಿ ತನ್ನದೇ ಛಾಪನ್ನು ಮೂಡಿಸಿರುವುದನ್ನು ಇಲ್ಲಿ
ಸ್ಮರಿಸಿಕೊಳ್ಳಬಹುದಾಗಿದೆ.