ನೆಲಮಂಗಲ: ಹೈಟೆನ್ಷನ್ ವಿದ್ಯುತ್ ಕಂಬದಿಂದ ಆಯ ತಪ್ಪಿ ಕೆಳಗೆ ಬಿದ್ದು ಕೆಪಿಟಿಸಿಎಲ್ ನೌಕರೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಅರೆಬೊಮ್ಮನಹಳ್ಳಿ ಗ್ರಾಮದ ಕೆರೆ ಬಳಿ ನಡೆದಿದೆ.

ನಾರಾಯಣ ಸ್ವಾಮಿಮೃತ ಕೆಪಿಟಿಸಿಲ್ ನೌಕರ, ಮೂಲತಃ ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಪರ್ವತಪುರ ಗ್ರಾಮದ ನಿವಾಸಿಯಾಗಿರುವ ನಾರಾಯಣ ಸ್ವಾಮಿ ಅರೆಬೊಮ್ಮನಹಳ್ಳಿ ಗ್ರಾಮದ ಕೆರೆ ಬಳಿಯ ಹೈಟೆನ್ಷನ್ ವಿದ್ಯುತ್ ಕಂಬದಲ್ಲಿ ಕೆಲಸ ನಿರ್ವಹಿಸುವ ವೇಳೆ ಆಯತಪ್ಪಿ ಕೆಳಗೆ ಬಿದಿದ್ದಾರೆ. ಗಂಭೀರ ಗಾಯಗೊಂಡಿದ್ದ ನಾರಾಯಣ ಸ್ವಾಮಿ ಅವರನ್ನು ಕೂಡಲೇ ಚಿಕಿತ್ಸೆಗಾಗಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಕಲಾಗಿದೆ.

RELATED ARTICLES  7 ದಿನಗಳ ಕುಸಿತಕ್ಕೆ ಅಂತ್ಯ: ಮುಂಬಯಿ ಶೇರು 123 ಅಂಕ ಏರಿಕೆ!