ಗೋಕರ್ಣ : ಹನೇಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿದ್ರಗೇರಿಯಲ್ಲಿ ವಿದ್ಯುತ್ ತಂತಿಯೊಂದು ತುಂಡಾಗಿ ಬಿದ್ದ ಪರಿಣಾಮ ಎರಡು ಹಸುಗಳು ಸಾವನಪ್ಪಿದ ದುರ್ಘಟನೆ ನಡೆದಿದೆ.
ಎಂದಿನಂತೆ ಹಸುಗಳು ಮೇವಿಗೆ ತೆರಳಿದ್ದವು,ಇದೇ ವೇಳೆಯಲ್ಲಿ ವಿದ್ಯುತ್ ತಂತಿಯೊಂದು ತುಂಡಾಗಿ ಬಿದ್ದ ಪರಿಣಾಮ ಎರಡು ಹಸುಗಳು ಸ್ಥಳದಲ್ಲೇ ಮೃತಪಟ್ಟಿದೆ. ನಂತರ ಸ್ಥಳಕ್ಕೆ ಆಗಮಿಸಿದ ಜಾನುವಾರು ಅಧಿಕಾರಿಗಳು ಮತ್ತು ಹೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.