ಬೆಂಗಳೂರುವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಸೋಮವಾರ ಪ್ರಕಟಿಸಿದ್ದು, ಕಳೆದ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೇರಿದಂತೆ ಮೂವರಿಗೆ ಟಿಕೆಟ್ ನೀಡಿದೆ.

ಹುಬ್ಬಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಜಗದೀಶ್‌ ಶೆಟ್ಟರ್ ಅವರಿಗೆ,  ಸಚಿವ ಬೋಸರಾಜು ಹಾಗೂ ತಿಪ್ಪಣ್ಣ ಕಮಕನೂರು ಅವರಿಗೆ ಕರ್ನಾಟಕ ವಿಧಾನ ಪರಿಷತ್‌ ಸ್ಥಾನಕ್ಕೆ ಕಾಂಗ್ರೆಸ್‌ ಟಿಕೆಟ್‌ ನೀಡಲಾಗಿದೆ.

RELATED ARTICLES  ಧಮ್ ಇದ್ರೆ ವೀರಶೈವ ಸಮಾವೇಶಕ್ಕೆ ಬಂದೋಗಿ: ಎಂ.ಬಿ ಪಾಟೀಲರಿಗೆ ಸವಾಲೆಸೆದ ಮಹಿಳೆ

ಲಕ್ಷ್ಮಣ ಸವದಿ, ಆರ್ ಶಂಕರ್ ಹಾಗೂ ಬಾಬುರಾವ್ ಚಿಂಚನಸೂರ್ ಅವರ ರಾಜೀನಾಮೆಯಿಂದ ತೆರವಾದ ಮೂರು ಸ್ಥಾನಗಳಿಗೆ ಚುನಾವಣಾ ಆಯೋಗ ಉಪ ಚುನಾವಣೆ ಘೋಷಿಸಿದೆ.

RELATED ARTICLES  ಶ್ರೀ ರಾಮಚಂದ್ರಾಪುರ ಮಠದ ಪರವಾಗಿ ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್

ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ ಕೊನೆಯ ದಿನವಾಗಿದೆ. ಜೂನ್ 30ರಂದು ಮತದಾನ ನಡೆಯಲಿದೆ ಮತ್ತು ಅಂದೇ ಫಲಿತಾಂಶ ಸಹ ಪ್ರಕಟವಾಗಲಿದೆ.