ಕಾರವಾರ : ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಅನಿಲ ಸೋರಿಕೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 52 ರ ಹುಬ್ಬಳ್ಳಿ -ಅಂಕೋಲ ಮಾರ್ಗದ ಅರೆಬೈಲ್ ಘಟ್ಟದಲ್ಲಿ ನಡೆದಿದೆ. ಅಪಘಾತದಲ್ಲಿ ಡ್ರೈವರ್ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದು ಹುಬ್ಬಳ್ಳಿಯಿಂದ ಮಹಾರಾಷ್ಟ್ರದ ರತ್ನಗಿರಿಗೆ ಹೋಗುತ್ತಿದ್ದ ಟ್ಯಾಂಕರ್ ನಿಯಂತ್ರಣ ತಪ್ಪಿ ಅವಘಡವಾಗಿದೆ.ಅನಿಲ ಸೋರಿಕೆಯಿಂದ ಹುಬ್ಬಳ್ಳಿ-ಅಂಕೋಲ ಹೆದ್ದಾರಿ ಸಂಚಾರ ಬಂದ್ ಮಾಡಲಾಗಿದ್ದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಗ್ಯಾಸ್ ಸೋರಿಕೆ ತಡೆದು ಟ್ಯಾಂಕರ್ ಮೇಲೆತ್ತಲು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಘಟನೆ ಸಂಬಂಧ ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES  ಸನ್ಯಾಸಿ ವೇಷದಲ್ಲಿ ಮಹಿಳೆಯರೊಂದಿಗೆ ಅಸಭ್ಯ ವರ್ತನೆ ತೋರುತ್ತಿದ್ದವ, ಜಾಗ ಖಾಲಿ ಮಾಡಿದ.